

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ರಾಷ್ಟೀಯ ಸೇವಾ ಯೋಜನೆ ಘಟಕದ ವತಿಯಿಂದ ಹಳೇ ವಿದ್ಯಾರ್ಥಿ ಸಂಘ, ಪದ್ಮಾಂಬ ಸಮೂಹ ಸಂಸ್ಥೆಗಳು ವೇಣೂರು, ಹಾಲು ಉತ್ಪಾದಕರ ಸಹಕಾರಿ ಸಂಘ ಕುಕ್ಕೇಡಿ, ಕುಕ್ಕೇಡಿ ಗ್ರಾಮ ಪಂಚಾಯಿತಿ, ಲಯನ್ಸ್ ಕ್ಲಬ್ ವೇಣೂರು, ಲಯನ್ಸ್ ಕ್ಲಬ್ ಮಂಗಳೂರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವೇಣೂರು, ಪಲ್ಗುಣಿ ಸೇವಾ ಸಂಘ ವೇಣೂರು, ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯ, ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು, ಜನಸೇವಾ ಟ್ರಸ್ಟ್ ಪಡ್ಡಂದಡ್ಕ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುಕ್ಕೇಡಿ ನಿಟ್ಟಡೆ ಇವರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ ವೇಣೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆಯಿತು.
ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಬಿ.ಇ.ಕಾರ್ಯಕ್ರಮ ಉದ್ಘಾಟಿಸಿ, ರಕ್ತದಾನ ಅತ್ಯಂತ ಶ್ರೇಷ್ಠ ದಾನ. ಇದರಿಂದ ಹಲವಾರು ಜೀವ ಉಳಿಸಿದ ಪುಣ್ಯ ಪ್ರಾಪ್ತಿಯಾಗುತ್ತದೆ, ಇಂತಹ ಕಾರ್ಯಕ್ರಮಗಳಿಂದ ಯುವಜನತೆ ದಾನದ ಗುಣವನ್ನು ಮೈಗೂಡಿಸಿಕೊಳ್ಳಲು ಸಾಧ್ಯ ಎಂದರು.
258 ರಕ್ತದಾನ ಶಿಬಿರವನ್ನು ಸಂಯೋಜಿಸಿರುವ ಎನ್.ಜೆ.ನಾಗೇಶ್ ಎಂ.ಜೆ.ಎಫ್., ಮಂಗಳೂರು ಲಯನ್ಸ್ ಕ್ಲಬ್‌ನ ಅಧ್ಯಕ್ಷ ಜಯರಾಜ್ ಪ್ರಕಾಶ್, ಸಂಸ್ಥೆಯ ಹಳೇ ವಿದ್ಯಾರ್ಥಿ ಗಬ್ಬರ್ ಸಿಂಗ್ ಚಲನಚಿತ್ರದ ನಾಯಕ ನಟ ಶರಣು ಶೆಟ್ಟಿ, ಜೀವವಿಮಾ ಪ್ರತಿನಿಧಿ ಜಗನ್ನಾಥ ದೇವಾಡಿಗ, ಸಂಸ್ಥೆಯ ಹಳೇ ವಿದ್ಯಾರ್ಥಿ ಮುಖ್ಯ ಜೀವವಿಮಾ ಸಲಹೆಗಾರರಾದ ಶ್ರೀಶಾಂತ್ ಕಾಮತ್ ಶುಭ ಹಾರೈಸಿದರು.
ಐಟಿಐ ಪ್ರಾಚಾರ್ಯ ವಿಶ್ವೇಶ್ವರ ಪ್ರಸಾದ್ ಕೆ.ಆರ್.ಅಧ್ಯಕ್ಷತೆ ವಹಿಸಿದ್ದರು. ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ.ಸುನಿಧಿ ಶೃತಿ ರಕ್ತದಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು.
ಕುಕ್ಕೇಡಿ ಗ್ರಾಪಂ ಅಧ್ಯಕ್ಷ ಅನಿತಾ ಕೆ., ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಪದ್ಮಾಂಬ ಸಮೂಹ ಸಂಸ್ಥೆಗಳ ಮಾಲೀಕ ಜಿನರಾಜ್ ಜೈನ್, ಪಲ್ಗುಣಿ ಸೇವಾ ಸಂಘದ ಶ್ರೀಕಾಂತ ಉಡುಪ, ಲಯನ್ಸ್ ಕ್ಲಬ್ ಕಾರ್ಯದರ್ಶಿ ದಯಾನಂದ ಭಂಡಾರಿ, ಕುಕ್ಕೇಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ನಿರ್ಮಲ್‌ಕುಮಾರ್ ಬೊಳ್ಜಾಲ್ ಗುತ್ತು, ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ಅಧ್ಯಕ್ಷ ರವಿ ಕುಮಾರ್ ಕೆ., ಸೌತ್‌ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಕಾರ್ಯದರ್ಶಿ ಗಣೇಶ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವೇಣೂರು ಇಲ್ಲಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತ ಪೂಜಾರಿ, ಮಂಗಳೂರು ಲಯನ್ಸ್ ಕ್ಲಬ್‌ನ ಕಾರ್ಯದರ್ಶಿ ಶಶಿಧರ್ ಉಪಸ್ಥಿತರಿದ್ದರು.
ಶಿಬಿರದಲ್ಲಿ ಒಟ್ಟು 119 ಯುನಿಟ್ ರಕ್ತ ಸಂಗ್ರಹಿಸಲಾಯಿತು. ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿ ಪದ್ಮಪ್ರಸಾದ್ ಬಸ್ತಿ ಸ್ವಾಗತಿಸಿ, ದಯಾನಂದ ಭಂಡಾರಿ ವಂದಿಸಿ ಎನ್.ಎಸ್.ಎಸ್.ಕಾರ್ಯಕ್ರಮ ಅಧಿಕಾರಿ ಸತೀಶ್ ನಿರೂಪಿಸಿದರು.