18ರಂದು ಉಜಿರೆಯಲ್ಲಿ ರಕ್ತದಾನ ಶಿಬಿರ

Blood Donation
Published on

ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ತಂಡ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ಎಸ್‌ಡಿಎಂ ಕಾಲೇಜು ಎನ್‌ಎನ್‌ಎಸ್ ಘಟಕ, ತಾಲೂಕು ಪತ್ರಕರ್ತರ ಸಂಘ ಮತ್ತಿತರರು ಸಂಘಟನೆಗಳ ಜಂಟಿ ಆಶ್ರಯದಲ್ಲಿ ಆ.18ರಂದು ಉಜಿರೆ ಕೃಷ್ಣಾನುಗ್ರಹ ಸಭಾಭವನದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ ಎಂದು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಕೆ.ಮೋಹನ್ ಕುಮಾರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ 5 ವಷರ್ಗಳ ಹಿಂದೆ ಚಾರ್ಮಾಡಿಯಲ್ಲಿ ನಡೆದ ನೆರೆ ಪ್ರವಾಹದ ಸಂದರ್ಭದಲ್ಲಿ ಹಾನಿಯಾದ ಕುಟುಂಬದವರ ಬದುಕು ನಿರ್ಮಾಣಕ್ಕೆ ಹುಟ್ಟಿದ ಬದುಕು ಕಟ್ಟೋಣ ಬನ್ನಿ ತಂಡ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಇತರ ಸಂಘಟನೆಯೊಂದಿಗೆ ನಡೆಸುತ್ತಿದ್ದು ಇದರಲ್ಲಿ ಯುವ ಜನತೆಯನ್ನು ತೊಡಗಿಸಿಕೊಂಡು ರಕ್ತದಾನದ ಕುರಿತು ಪ್ರೇರಣೆ ನೀಡುವ ಕಾರ್ಯ ಮಾಡಲಾಗುವುದು ಎಂದರು.

ರೋಟರಿ ಕ್ಲಬ್ ಅಧ್ಯಕ್ಷ ಪೂರಣ್ ವರ್ಮ ಮಾತನಾಡಿ, ಈ ಬಾರಿ ಬ್ಲಡ್ ಬ್ಯಾಂಕ್‌ನಲ್ಲಿ ರಕ್ತದ ಕೊರತೆ ಇದ್ದು, ಇಂತಹ ಶಿಬಿರದ ಮೂಲಕ ರಕ್ತದಾನಕ್ಕೆ ಪ್ರೇರಣೆ ನೀಡಲಾಗುವುದು ಎಂದರು.

ಎಸ್‌ಡಿಎಂ ಕಾಲೇಜು ಎನ್‌ಎಸ್‌ಎಸ್ ಘಟಕದ ಮುಖ್ಯಸ್ಥ ಮಹೇಶ್, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ರಾಜೇಶ್ ಪೈ, ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ರಾವ್, ಮಾಜಿ ಕಾರ್ಯದರ್ಶಿ ಶ್ರೀಧರ ಕೆ.ವಿ.ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net