ಹದಿನೈದು ವರ್ಷದ ನೆನಪಿಗೆ ಸಾಮಾಜಿಕ ಕಾರ್ಯ: ಡಿಎಆರ್ ಸಿಬ್ಬಂದಿಯಿಂದ ಸಂಭ್ರಮಾಚರಣೆ

1 (5)
Published on

ಮಂಡ್ಯ: ವೃತ್ತಿಗೆ ಸೇರಿ 15 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆಯ 2008ನೇ ಬ್ಯಾಚ್‌ನ ಸಿಬ್ಬಂದಿ ಸಾಮಾಜಿಕ ಸೇವೆ ಮೂಲಕ ಸಂಭ್ರಮವನ್ನು ಆಚರಣೆ ಮಾಡಿದರು.

ನಗರದ ಡಿಎಆರ್ ಮೈದಾನದಲ್ಲಿ ಜೀವಧಾರೆ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಿದ್ದ ಶಿಬಿರದಲ್ಲಿ 53 ಸಿಬ್ಬಂದಿ ರಕ್ತದಾನ ಮಾಡಿದರು. ಅಂತೆಯೇ ನೇತ್ರದಾನಕ್ಕೆ ನೋಂದಣಿ ಮಾಡಿಕೊಳ್ಳಲಾಯಿತು. ಇನ್ನು ಮೈದಾನದಲ್ಲಿ 25ಕ್ಕೂ ಹೆಚ್ಚು ಸಸಿಗಳನ್ನು ನೆಟ್ಟು ನೀರೆರೆಯಲಾಯಿತು. ಇದರೊಟ್ಟಿಗೆ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ ಮಾಡುವ ಮೂಲಕ ಸಂಭ್ರಮಿಸಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಮಾತನಾಡಿ, ಪೊಲೀಸರು ಶಿಸ್ತಿನ ಸಿಪಾಯಿಗಳು. ತಮ್ಮ 15 ವರ್ಷಗಳ ಸಂಭ್ರಮಾಚರಣೆಯಲ್ಲಿ ಸಮಾಜಮುಖಿ ಕಾರ್ಯ ಕ್ರಮಗಳನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ. ಕರ್ತವ್ಯದ ನಡುವೆ ತಮ್ಮ ಆರೋಗ್ಯವನ್ನು ಕೂಡ ಕಾಪಾಡಿಕೊಳ್ಳಬೇಕು. ಜತೆಗೆ ಶಿಸ್ತಿನಿಂದ ವೃತ್ತಿಯನ್ನು ನಿರ್ವಹಣೆ ಮಾಡಬೇಕು. ಮೇಲಧಿಕಾರಿಗಳು ನೀಡುವ ಸಲಹೆಯನ್ನು ಅನುಸರಿಸಬೇಕೆಂದು ಸಲಹೆ ನೀಡಿದರು.

ಅಪರ ಜಿಲ್ಲಾಧಿಕಾರಿ ತಿಮ್ಮಯ್ಯ, ಡಿವೈಎಸ್ಪಿ ರಾಚಯ್ಯ, ಪಿಐ ಜಗದೀಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net