ನೈಋತ್ಯ ರೈಲ್ವೆಯಿಂದ ರಕ್ತದಾನ ಶಿಬಿರ

SWR New
Published on

ಹುಬ್ಬಳ್ಳಿ : ನೈಋತ್ಯ ರೈಲ್ವೆ ಕೇಂದ್ರೀಯ ಆಸ್ಪತ್ರೆಯಲ್ಲಿ ಕಾರ್ಗಿಲ್ ವಿಜಯ ದಿವಸ ಮತ್ತು ಆಸ್ಪತ್ರೆ ದಿನಾಚರಣೆ ಅಂಗವಾಗಿ ಶುಕ್ರವಾರದಂದು ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ಉದ್ಘಾಟಿಸಿ ಮಾತನಾಡಿದ ನೈಋತ್ಯ ರೈಲ್ವೆಯ ಪ್ರಧಾನ ಮುಖ್ಯ ವೈದ್ಯಕೀಯ ನಿರ್ದೇಶಕ ಡಾ. ಜಿ.ಎಸ್. ರಾಮಚಂದ್ರ, ತುರ್ತು ನಿಗಾ ಮತ್ತು ದೀರ್ಘಕಾಲದ ವೈದ್ಯಕೀಯ ಪರಿಸ್ಥಿತಿಗಳಲ್ಲಿ ರಕ್ತದಾನದ ನಿರ್ಣಾಯಕ ಪಾತ್ರದ ಪ್ರಾಮುಖ್ಯತೆ ಕುರಿತು ವಿವರಿಸಿದರು.

ಈ ಶಿಬಿರದಲ್ಲಿ 66 ಜನರು ರಕ್ತದಾನ ಮಾಡಿದರು. ಹುಬ್ಬಳ್ಳಿಯ ಕೇಂದ್ರೀಯ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಬಿ.ಟಿ. ಕೃಷ್ಣಾರೆಡ್ಡಿ, ಸಹಾಯಕ ಮುಖ್ಯ ಆರೋಗ್ಯ ನಿರ್ದೇಶಕ ಡಾ. ಶಿವಕುಮಾರ, ಎಸ್​ಡಿಜೆಸಿಎಂ ರಾಷೊ್ಟ್ರೕತ್ಥಾನ ರಕ್ತ ಬ್ಯಾಂಕ್​ನ ದತ್ತಮೂರ್ತಿ ಕುಲಕರ್ಣಿ ಹಾಗೂ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net