ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ

17 ckm 1
ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಯಲ್ಲಿ ವಾಸವಿ ಯುವ ಜನ ಸಂಘ ಹಾಗೂ ವಾಸವಿ ಕ್ಲಬ್‌ನಿಂದ ವಾಸವಿ ಜಯಂತಿ ಅಂಗವಾಗಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಡಾ.ಮುರುಳೀಧರ್, ದಿನೇಶ್ ಗುಪ್ತಾ, ಶ್ರೀನಿವಾಸ್, ಅನುಪಮಾ ದಿನೇಶ್ ಗುಪ್ತಾ, ಅರವಿಂದ್ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ರಕ್ತದಾನ ಮಾಡುವುದರಿಂದ ಮತ್ತೊಬ್ಬರ ಜೀವವನ್ನು ಉಳಿಸುವ ಜೊತೆಗೆ ರಕ್ತದಾನ ಮಾಡಿದ ವ್ಯಕ್ತಿಯ ಆರೋಗ್ಯವೂ ಉತ್ತಮವಾಗುತ್ತದೆ ಎಂದು ರಕ್ತನಿಧಿ ವೈದ್ಯ ಡಾ. ಮುರುಳೀಧರ್ ತಿಳಿಸಿದರು.

ನಗರದ ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ವಾಸವಿ ಜಯಂತಿ ಅಂಗವಾಗಿ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ನಿಂದ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಅಪಘಾತ ಮತ್ತು ಹೆರಿಗೆ ಶಸ್ತ್ರ ಚಿಕಿತ್ಸೆಗೆ ಒಳಪಡುವ ರೋಗಿಗಳಿಗೆ ರಕ್ತದಾನಿಗಳು ಮಾಡಿದ ಸಹಾಯ ತುಂಬಾ ಉಪಯುಕ್ತವಾಗಿರುತ್ತದೆ. ಪ್ರತಿಯೊಬ್ಬರೂ ರಕ್ತದಾನ ಮಾಡುವ ಮೂಲಕ ಮಾನವೀಯತೆ ಮೆರೆಯಬೇಕು ಎಂದು ಕರೆನೀಡಿದರು.
ವಾಸವಿ ಯುವ ಜನ ಸಂಘದ ಅಧ್ಯಕ್ಷ ದಿನೇಶ್ ಗುಪ್ತ ಮಾತನಾಡಿ, ವಾಸವಿ ಜಯಂತಿ ಅಂಗವಾಗಿ ಪ್ರತಿ ವರ್ಷ ಜನಪರವಾದ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದೇವೆ. ಈ ವರ್ಷ ಸಾರ್ವಜನಿಕ ಆಸ್ಪತ್ರೆ ರೋಗಿಗಳಿಗೆ ಸಂಘದಿಂದ ಹಣ್ಣು ಹಂಪಲು ವಿತರಣೆ, ಗ್ಲುಕೋಸ್ ವಿತರಣೆ ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು ಎಂದರು.
ಇದಲ್ಲದೆ ಎಂಜಿ ರಸ್ತೆ ವಾಸವಿ ದೇವಸ್ಥಾನದ ಮುಂಭಾಗದಲ್ಲಿ ಸಾರ್ವಜನಿಕರಿಗಾಗಿ ಪ್ರಸಾದ, ಮಜ್ಜಿಗೆ, ಪಾನಕ ಕೋಸಂಬರಿ ವ್ಯವಸ್ಥೆ ಮಾಡಲಾಗಿತ್ತು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಾಸವಿ ಯುವಜನ ಸಂಘದ ಪದಾಧಿಕಾರಿಗಳಾದ ಶ್ರೀನಿವಾಸ್, ಅನುಪಮ ದಿನೇಶ್‌ಗುಪ್ತ, ಅರವಿಂದ್, ಕಾವ್ಯ ಅರವಿಂದ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net