

ಕಾಸರಗೋಡು: ಬಿಜೆಪಿ ರಾಷ್ಟ್ರೀಯಮಟ್ಟದಲ್ಲಿ ಸೆ.17ರಿಂದ ಆಯೋಜಿಸುತ್ತಿರುವ ಸೇವಾ ಪಾಕ್ಷಿಕದ ಅಂಗವಾಗಿ ಭಾರತೀಯ ಜನತಾ ಯುವ ಮೋರ್ಚಾ ವತಿಯಿಂದ ರಕ್ತದಾನ ಶಿಬಿರ ಕಾಸರಗೋಡಿನಲ್ಲಿ ಜರುಗಿತು.
ಜನರಲ್ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಯಿತು. ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷ ಎಂ.ಎಲ್.ಅಶ್ವಿನಿ ರಕ್ತದಾನ ಶಿಬಿರ ಉದ್ಘಾಟಿಸಿದರು. ಯುವ ಮೋರ್ಚಾ ಕಾಸರಗೋಡು ಜಿಲ್ಲಾ ಅಧ್ಯಕ್ಷ ಕೆ.ಅಶ್ವಿನ್ ಅಧ್ಯಕ್ಷತೆ ವಹಿಸಿದ್ದರು. ಪಿ.ಎಂ.ಸುಹೈಲ್, ವಕೀಲ ಧನುಷ್ ಎಚ್.ಎನ್. ಮೊದಲಾದವರಿದ್ದರು.