

ಉಡುಪಿ: ಅರಣ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿ ಗಸ್ತು ಕಾರ್ಯಾಚರಣೆಗೆ ತಂಡದಲ್ಲಿ ತೆರಳಬೇಕು. ಆತ್ಮರಕ್ಷಣೆಗೆ ಬೇಕಾದ ಅಗತ್ಯ ಉಪಕರಣ ತೆಗೆದುಕೊಂಡು ಹೋಗಬೇಕು. ಇದರಿಂದ ವನ್ಯಜಿವಿಗಳಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಕುದುರೆಮುಖ ವನ್ಯಜಿವಿ ವಿಭಾಗದ ಕಾರ್ಕಳ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿವರಾಮ್ ಬಾಬು ಎಂ. ಹೇಳಿದ್ದಾರೆ.
ಉಪ ವಲಯ ಅರಣ್ಯಾಧಿಕಾರಿಗಳ ಸಂ ಹಾಗೂ ಗಸ್ತು ಅರಣ್ಯ ಪಾಲಕರ ಮತ್ತು ವೀಕ್ಷಕರ ಸಂ ಆಶ್ರಯದಲ್ಲಿ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ರಕ್ತನಿಧಿ ಕೇಂದ್ರ ಮತ್ತು ಭಾರತೀಯ ವೈದ್ಯಕಿಯ ಸಂ ಸಹಯೋಗದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ಸ್ಮರಣಾರ್ಥ ಗುರುವಾರ ನಡೆದ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.
ಸರ್ಕಾರ ಹೊರಗುತ್ತಿಗೆ ನೌಕರರು ಸಹಿತ ಅರಣ್ಯ ಇಲಾಖೆಯ ಎಲ್ಲಾ ಸಿಬ್ಬಂದಿಗೆ ಸಂಬಳ ಖಾತೆಯನ್ನು ತೆರೆಯಲು ಆದೇಶ ನೀಡಿದೆ. ಇದರಿಂದ 1 ಕೋಟಿ ರೂ.ವರೆಗೆ ಜೀವವಿಮೆ ದೊರೆಯಲಿದೆ. ಕುದುರೆಮುಖ ವನ್ಯಜಿವಿ ವಿಭಾಗದಿಂದ ಹೊರಗುತ್ತಿಗೆ ಸಿಬ್ಬಂದಿಗೆ 10 ಲಕ್ಷ ರೂ. ಪೋಸ್ಟಲ್ ಇನ್ಸೂರೆನ್ಸ್ ಮಾಡಲಾಗಿದೆ ಎಂದರು.
ಶಾಸಕ ಯಶಪಾಲ್ ಸುವರ್ಣ ಮುಖ್ಯಅತಿಥಿಯಾಗಿದ್ದರು. ಉಪವಲಯ ಅರಣ್ಯಾಧಿಕಾರಿಗಳ ಸಂಘದ ಅಧ್ಯಕ್ಷ ನಾಗೇಶ್ ಬಿಲ್ಲವ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ಕೆ., ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಂಪಾರು ದಿನಕರ ಶೆಟ್ಟಿ, ಜಿಲ್ಲಾ ರಕ್ತನಿಧಿ ಕೇಂದ್ರದ ಡಾ. ವೀಣಾ ಶೆಟ್ಟಿ, ಗಸ್ತು ಅರಣ್ಯ ಪಾಲಕ ಸಂಘದ ಗೌರವಾಧ್ಯಕ್ಷ ದೇವರಾಜ ಪಾಣ, ಐಎಂಎ ಅಧ್ಯಕ್ಷ ಡಾ. ಕಲ್ಯಾ ಸುರೇಶ್ ಶೆಣೈ, ಮೂಡುಬಿದಿರೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ ಶ್ರೀಧರ್ , ಕುಂದಾಪುರ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಪೂಜಾರಿ , ಸಿದ್ದಾಪುರ ವನ್ಯಜಿವಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ದಿನೇಶ್ ಜಿ. ಡಿ. , ಕರ್ನಾಟಕ ರಾಜ್ಯ ವಲಯ ಅರಣ್ಯಾಧಿಕಾರಿ ಸಂಘದ ಕಾರ್ಯದರ್ಶಿ ಕಿರಣ್ ಕುಮಾರ್ ಉಪಸ್ಥಿತರಿದ್ದರು. ಗಸ್ತು ಅರಣ್ಯ ಪಾಲಕರ ಸಂಘದ ಅಧ್ಯಕ್ಷ ಕೇಶವ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪವಲಯ ಅರಣ್ಯಾಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ರವಿ ಸ್ವಾಗತಿಸಿದರು.ಪ್ರಶಾಂತ್ ಶೆಟ್ಟಿ ಹಾವಂಜೆ ಕಾರ್ಯಕ್ರಮ ನಿರೂಪಿಸಿದರು. ಶಿಬಿರದಲ್ಲಿ ಒಟ್ಟು 155 ಯೂನಿಟ್ ರಕ್ತ ಸಂಗ್ರಹಿಸಿ ಜಿಲ್ಲಾ ರಕ್ತನಿಧಿ ಕೇಂದ್ರಕ್ಕೆ ಹಸ್ತಾಂತರಿಸಲಾಯಿತು. ಅರಣ್ಯ ರಕ್ಷಣೆಯಲ್ಲಿ ಮಡಿದ ಹುತಾತ್ಮರಿಗೆ ಗೌರವ ನಮನ ಸಲ್ಲಿಸಲಾಯಿತು.