

ಉಡುಪಿ: ಇನ್ನೊಬ್ಬರ ಜೀವ ಉಳಿಸಲು ನೆರವಾಗುವ ರಕ್ತದಾನದ ಬಗ್ಗೆ ಭಯ ಅನಗತ್ಯ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಬದುಕಿದ್ದಾಗ ರಕ್ತದಾನ ಮತ್ತು ಬದುಕಿನ ನಂತರ ನೇತ್ರದಾನ, ಅಂಗಾಂಗ ದಾನ ಮಾಡುವ ಮೂಲಕ ಇನ್ನೊಬ್ಬರಿಗೆ ಜೀವನ ನೀಡಬಹುದು ಎಂದು ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು.
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಜಿಲ್ಲಾಸ್ಪತ್ರೆ ಸಹಯೋಗದಲ್ಲಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆದ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ವಿಪ ಸದಸ್ಯ ಮಂಜುನಾಥ್ ಭಂಡಾರಿ, ಮುಖಂಡರಾದ ಗೋಪಾಲ್ ಪೂಜಾರಿ, ಮುನಿಯಾಲು ಉದಯ್ ಶೆಟ್ಟಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಪ್ರಸಾದ್ ರಾಜ್ ಕಾಂಚನ್, ರಮೇಶ್ ಕಾಂಚನ್, ವೆರೋನಿಕಾ ಕರ್ನೇಲಿಯೋ, ಜ್ಯೋತಿ ಹೆಬ್ಬಾರ್ ಹಾಗೂ ಮಮತಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.