ಬೇಲೂರಿನಲ್ಲಿ ರಕ್ತದಾನ ಶಿಬಿರ

01
ಬೇಲೂರಿನಲ್ಲಿ ಶಾಸಕ ಎಚ್.ಕೆ.ಸುರೇಶ್ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿದ್ದ ಶಿಬಿರದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಸಂಜಯ್ ಕೌರಿ ಮತ್ತು ಕಾರ್ಯಕರ್ತರು ರಕ್ತದಾನ ಮಾಡಿದರು.
Published on

ಬೇಲೂರು: ಶಾಸಕ ಎಚ್.ಕೆ.ಸುರೇಶ್ ಅವರ 53ನೇ ವರ್ಷದ ಹುಟ್ಟುಹಬ್ಬವನ್ನು ಅಭಿಮಾನಿಗಳು ಮತ್ತು ಕಾರ್ಯಕರ್ತರು ಬುಧವಾರ ಶ್ರೀ ಚನ್ನಕೇಶವಸ್ವಾಮಿಗೆ ಪೂಜೆ ಸಲ್ಲಿಸಿ, ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ನೋಟ್ ಬುಕ್‌ಗಳನ್ನು ವಿತರಿಸಿ, ರಕ್ತದಾನ ಶಿಬಿರ ಹಾಗೂ ಕ್ಷೇತ್ರ ವ್ಯಾಪ್ತಿಯ ಶಕ್ತಿ ಕೇಂದ್ರಗಳಲ್ಲಿ ವಿವಿಧ ಗಿಡಗಳನ್ನು ನೆಡುವ ಮೂಲಕ ಆಚರಿಸಿದರು.

ಬಿಜೆಪಿ ತಾಲೂಕು ಅಧ್ಯಕ್ಷ ಸಂಜಯ್ ಕೌರಿ ಮಾತನಾಡಿ, ಸರ್ಕಾರಿ ಆಸ್ಪತ್ರೆ ಒಳ ರೋಗಿಗಳಿಗೆ ಹಣ್ಣುಗಳನ್ನು ವಿತರಿಸಿ, ಸರ್ಕಾರಿ ಶಾಲೆಯ ಎಲ್ಲ ಮಕ್ಕಳಿಗೂ ನೋಟ್‌ಬುಕ್ ಮತ್ತು ಪೆನ್ನುಗಳನ್ನು ವಿತರಿಸುತ್ತಿದ್ದೇವೆ. ಜತೆಗೆ ಕ್ಷೇತ್ರ ವ್ಯಾಪ್ತಿಯಲ್ಲಿರುವ ಮಹಾಶಕ್ತಿ ಕೇಂದ್ರಗಳ ವ್ಯಾಪ್ತಿಯಲ್ಲಿ ಸ್ಥಳೀಯ ಮುಖಂಡರ ನೇತೃತ್ವದಲ್ಲಿ ನೋಟ್‌ಬುಕ್ ವಿತರಿಸುವುದಲ್ಲದೆ, ಅಲ್ಲಲ್ಲಿ ಗಿಡಗಳನ್ನು ನೆಡಲಾಗುತ್ತಿದೆ. ರಕ್ತದಾನ ಏರ್ಪಡಿಸಲಾಗಿದೆ ಎಂದು ತಿಳಿಸಿದರು.

ಮುಖಂಡರಾದ ಅಡಗೂರು ಬಸವರಾಜು, ವಿನಯ್, ಪ್ರಸನ್ನ, ಪ್ರಕಾಶ್, ರಮೇಶ್ ಸುವರ್ಣ, ಚೇತನ್, ಆನಂದ್, ಪ್ರಣೀತ್, ದರ್ಶನ್, ಅಶೋಕ್, ನವೀನ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net