

ಮುಂಡರಗಿ: ಆಷಾಢ ಮಾಸದ ನಿಮಿತ್ತ ಅನುಭಾವಿಗಳ ಅನುಭಾವ ದರ್ಶನ ಪ್ರವಚನ ನಿಮಿತ್ತ ಪಟ್ಟಣದ ಶ್ರೀ ಜಗದ್ಗುರು ತೋಂಟದಾರ್ಯ ಶಾಖಾಮಠದಲ್ಲಿ ಜು. 29ರಂದು ಬೆಳಗ್ಗೆ 9 ಗಂಟೆಗೆ ಜಗದ್ಗುರು ತೋಂಟದಾರ್ಯ ಶಾಖಾಮಠದ ಆವರಣದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಆಸಕ್ತ ಸಹೃದಯಿಗಳು ಆಗಮಿಸಿ ರಕ್ತದಾನ ಮಾಡುವ ಮೂಲಕ ಶಿಬಿರ ಯಶಸ್ವಿಗೊಳಿಸಬೇಕು. ಸಂಜೆ 7 ಗಂಟೆಗೆ ಪ್ರವಚನದೊಂದಿಗೆ ಪತ್ರಿಕಾ ದಿನಾಚರಣೆ ಕಾರ್ಯಕ್ರಮವೂ ನಡೆಯಲಿದೆ ಎಂದು ಪ್ರವಚನ ಸಮಿತಿ ಅಧ್ಯಕ್ಷ ಎಸ್.ಎಸ್. ಗಡ್ಡದ ಹಾಗೂ ಜಗದ್ಗುರು ತೋಂಟದಾರ್ಯ ಸೇವಾ ಸಮಿತಿ ಅಧ್ಯಕ್ಷ ಎಚ್.ವಿರೂಪಾಕ್ಷಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.