ಶ್ರೀ ಸುತ್ತೂರು ಜನ್ಮ ದಿನಾಚರಣೆ ಪ್ರಯುಕ್ತ ರಕ್ತದಾನ ಶಿಬಿರ

Blood Donation Camp on the occasion of Sattur shri Birth Anniversary
Published on

ಮೈಸೂರು: ನಗರದ ಜೀವದಾರ ರಕ್ತ ನಿಧಿ ಕೇಂದ್ರದಲ್ಲಿ ಶನಿವಾರ ಶ್ರೀ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಜನ್ಮ ದಿನಾಚರಣೆ ಪ್ರಯುಕ್ತ 30ಕ್ಕೂ ಹೆಚ್ಚು ಭಕ್ತಾದಿಗಳು ಸ್ವಯಂ ಪ್ರೇರಿತ ರಕ್ತದಾನ ಮಾಡಿದರು.

ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಮಾತನಾಡಿ, ಅಕ್ಷರ, ಅನ್ನ ದಾಸೋಹದ ಮೂಲಕ ಸಮಾಜಸೇವಾ ಚಟುವಟಿಕೆಯಲ್ಲಿ ಸುತ್ತೂರು ಮಠದ ತೊಡಗಿಕೊಂಡಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ದಸರಾ ಉತ್ಸವಕ್ಕೆ ಉದ್ಘಾಟಕರಾಗಿ ಸುತ್ತೂರು ಶ್ರೀಗಳನ್ನು ಆಹ್ವಾನಿಸಬೇಕು. ಈ ವಿಚಾರವಾಗಿ ಈಗಾಗಲೇ ಎರಡು ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಶಾಸಕ ಟಿ.ಎಸ್.ಶ್ರೀವತ್ಸ ಮನವಿ ಮಾಡಿದ್ದಾರೆ. ಸರ್ಕಾರ ಸುತ್ತೂರು ಶ್ರೀಗಳನ್ನು ಆಹ್ವಾನಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭ ಬಿಜೆಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಣುಕಾ ರಾಜ್, ಕೆಪಿಸಿಸಿ ಸದಸ್ಯ ನಜರ್‌ಬಾದ್ ನಟರಾಜ್, ಜೆಡಿಎಸ್ ಕಾರ್ಯಾಧ್ಯಕ್ಷ ಪ್ರಕಾಶ್ ಪ್ರಿಯದರ್ಶನ್, ಬಿಜೆಪಿ ಯುವ ಮೋರ್ಚಾ ನಗರ ಪ್ರಧಾನ ಕಾರ್ಯದರ್ಶಿ ಲೋಹಿತ್, ಪತ್ರಕರ್ತ ಮಧು ಕುಮಾರ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net