ರಕ್ತದಾನದಿಂದ ಉತ್ತಮ ಆರೋಗ್ಯ

6 bir 1
Published on

ಬೀರೂರು: ರಕ್ತದಾನ ರೋಗಿಗಳ ಜೀವ ಉಳಿಸುವ ಮಹತ್ವದ ಕಾರ್ಯವಾಗಿದೆ ಎಂದು ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಮುಬಾರಕ್ ಹೇಳಿದರು.

ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಹಳೇ ವಿದ್ಯಾರ್ಥಿಗಳ ಸಂಘ ಹಾಗೂ ಶಿವಮೊಗ್ಗದ ಆಶಾ ಜ್ಯೋತಿ ಸ್ವಯಂ ಪ್ರೇರಿತ ರಕ್ತ ಕೇಂದ್ರದ ಆಶ್ರಯದಲ್ಲಿ ಶಾಸಕ ಕೆ.ಎಸ್.ಆನಂದ್ ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಿದ್ದ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿ, ಜನಸಂಖ್ಯೆ ಹೆಚ್ಚಿರುವ ನಮ್ಮ ದೇಶದಲ್ಲಿ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವವರು ಮತ್ತು ರಸ್ತೆ ಅಪಘಾತಗಳಲ್ಲಿ ಗಾಯಗೊಳ್ಳುವವರು ಹೆಚ್ಚಾಗುತ್ತಿದ್ದಾರೆ. ಇದರಿಂದ ರಕ್ತದ ಕೊರತೆ ತೀವ್ರವಾಗಿದೆ. ಆರೋಗ್ಯವಂತ ವ್ಯಕ್ತಿ ನಿಯಮಿತವಾಗಿ ರಕ್ತದಾನ ಮಾಡುವುದರಿಂದ ಹೃದಯ ರಕ್ತನಾಳದ ಆರೋಗ್ಯ ಸುಧಾರಿಸುತ್ತದೆ. ರಕ್ತದಾನದಿಂದ ನಿಮ್ಮಲ್ಲಿರುವ ಸಮಸ್ಯೆಗಳು ಕೂಡ ಬೆಳಕಿಗೆ ಬರುತ್ತದೆ. ರಕ್ತದಾನ ಮಾಡುವುದರಿಂದ ಒಂದು ಜೀವಕ್ಕೆ ಆಸರೆಯಾದ ಆತ್ಮತೃಪ್ತಿ ನಿಮ್ಮದಾಗುತ್ತದೆ ಎಂದರು.

40ಕ್ಕೂ ಹೆಚ್ಚಿನ ಯುವಕರು ರಕ್ತದಾನ ಮಾಡಿದರು. ಬಿ.ಕೆ.ಶಶಿಧರ್, ಪಿಎಸ್‌ಐ ಸಜಿತ್ ಕುಮಾರ್, ಮುಖ್ಯಾಧಿಕಾರಿ ಜಿ.ಪ್ರಕಾಶ್, ಶಾಸಕರ ಸಹಾಯಕ ಪ್ರಕಾಶ್, ಕಾಂಗ್ರೆಸ್ ಮುಖಂಡರಾದ ಸುಧೀಂದ್ರ ಹೆಬ್ಬಾರ್, ಸಂತೋಷ್ ಕುಮಾರ್, ಮನು, ಜೆಸಿಐ ಅಧ್ಯಕ್ಷ ಮೋಹನ್ ಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net