ಬೃಹತ್ ರಕ್ತದಾನ, ಕಣ್ಣಿನ ತಪಾಸಣಾ ಉಚಿತ ಶಿಬಿರ

camp
Published on

ಹೆಬ್ರಿ: ದಿ.ಯತೀಶ್ ಶೆಟ್ಟಿ ದೊಂಡೆರಂಗಡಿ ಅವರ 15ನೇ ವರ್ಷದ ಸ್ಮರಣಾರ್ಥ ಬೃಹತ್ ರಕ್ತದಾನ, ಕಣ್ಣಿನ ತಪಾಸಣಾ ಉಚಿತ ಶಿಬಿರ ಇತ್ತೀಚೆಗೆ ಪ್ರಾಥಮಿಕ ಆರೋಗ್ಯ ಕೇಂದ್ರ ದೊಂಡೆರಂಗಡಿಯಲ್ಲಿ ನಡೆಯಿತು.

ಮುನಿಯಾಲು ಲಯನ್ಸ್ ಕ್ಲಬ್ ಅಧ್ಯಕ್ಷ ಭುಜಂಗ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಉದಯ ಶೆಟ್ಟಿ ಶುಭ ಹಾರೈಸಿದರು.

ಶಿಬಿರದಲ್ಲಿ 57 ಮಂದಿ ರಕ್ತದಾನ ಮಾಡಿದರು. 72 ಮಂದಿ ಕಣ್ಣಿನ ಪರೀಕ್ಷೆ ಮಾಡಿಸಿದರು. ದಿ.ಯತೀಶ್ ಶೆಟ್ಟಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಪಂಚಾಯಿತಿ ಸದಸ್ಯ ಅರವಿಂದ ಹೆಗ್ಡೆ ಅವರ ನಿಧನಕ್ಕೆ ಸಂತಾಪ ಸೂಚಿಸಿ, ಮೌನಾಚರಣೆ ಮಾಡಲಾಯಿತು.

ಡಾ.ವೀಣಾ, ಡಾ.ಐಶ್ವರ್ಯ, ಡಾ.ಪ್ರಮೋದ್ ಕುಮಾರ್ ಹೆಗ್ಡೆ, ಯಶಸ್ವಿ ಗೆಳೆಯರ ಬಳಗ ಅಧ್ಯಕ್ಷ ಅಖಿಲೇಶ್ ಶೆಟ್ಟಿ, ಪಂಚಾಯಿತಿ ಸದಸ್ಯ ದೀಕ್ಷಿತ್ ಶೆಟ್ಟಿ, ಭೂ ಅಭಿವೃದ್ಧಿ ಬ್ಯಾಂಕ್ ಉಪಾಧ್ಯಕ್ಷ ಭೋಜ ಪೂಜಾರಿ, ಕಡ್ತಲ ಪಂಚಾಯಿತಿ ಮಾಜಿ ಅಧ್ಯಕ್ಷ ರಾಘವ ದೇವಾಡಿಗ ಉಪಸ್ಥಿತರಿದ್ದರು. ಬೇಬಿ ಎಳ್ಳಾರೆ ಪ್ರಾರ್ಥಿಸಿದರು. ಗೋಪಿನಾಥ್ ಭಟ್ ಸ್ವಾಗತಿಸಿ, ವಿನಯ ಆರ್.ಭಟ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net