25 ಜನರಿಂದ ರಕ್ತದಾನ

ಅರಕಲಗೂಡಿನಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ವತಿಯಿಂದ ಆಯೋಜಿಸಿದ್ದ ಶಿಬಿರದಲ್ಲಿ ದಾನಿಗಳು ರಕ್ತದಾನ ಮಾಡಿದರು.
ಅರಕಲಗೂಡಿನಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ವತಿಯಿಂದ ಆಯೋಜಿಸಿದ್ದ ಶಿಬಿರದಲ್ಲಿ ದಾನಿಗಳು ರಕ್ತದಾನ ಮಾಡಿದರು.
Published on

ಅರಕಲಗೂಡು: ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ರಾಜಯೋಗಿನಿ ದಾದಿ ಪ್ರಕಾಶ್ ಮಣಿ ಅವರ 18ನೇ ಪುಣ್ಯಸ್ಮರಣೆ ಪ್ರಯುಕ್ತ ಪಟ್ಟಣದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಚಾಮರಾಜೇಂದ್ರ ಆಸ್ಪತ್ರೆಯ ರಕ್ತನಿಧಿ ಮತ್ತು ರೋಟರಿ ಕ್ಲಬ್, ಮ್ಯಾಕ್ಸಿಕ್ಯಾಬ್ ಮಾಲೀಕರು ಮತ್ತು ಚಾಲಕರ ಸಂಘ, ಕಾರೋನೇಷನ್ ಸಹಕಾರ ಸಂಘ, ದೊಡ್ಡಮ್ಮ ತಾಯಿ ಗೂಡ್ಸ್ ಆಟೋ ಸಂಘದ ಸಹಯೋಗದಲ್ಲಿ ಸಂಸ್ಥೆಯ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಶಿಬಿರದಲ್ಲಿ ಇಪ್ಪತ್ತೈದು ನಾಗರಿಕರು ರಕ್ತದಾನ ಮಾಡಿದರು.

ಕಾರ್ಯಕ್ರಮದಲ್ಲಿ ಬಿ.ಕೆ. ಚಂದ್ರಿಕಾ ಬಿ.ಕೆ.ಸುಷ್ಮಾ, ಯಶೋದಾ, ಶಶಿ, ಪುಷ್ಪಾ, ರಾಜಣ್ಣ, ಕಿರಣ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net