ರಕ್ತದಾನ ಶ್ರೇಷ್ಠ ದಾನ

Blood donation is a great charity
ವಿಜಯಪುರದ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್​ ವಿದ್ಯಾಲಯದ ವಿದ್ಯಾರ್ಥಿಗಳು ರಕ್ತದಾನ ಮಾಡಿದರು. ಪಿ.ಬಿ. ಕಳಸಗೊಂಡ, ಡಾ. ಪ್ರಕಾಶ ಪಾಟೀಲ, ಸಂತೋಷ ಸಾಳುಂಕೆ ಮತ್ತಿತರರಿದ್ದಾರೆ.
Published on

ವಿಜಯಪುರ : ರಕ್ತದಾನ ಮಾಡುವುದರಿಂದ ಇನ್ನೊಂದು ಜೀವವನ್ನು ರಸಬಹುದಾಗಿದೆ. ಹಲವು ದಾನಗಳಲ್ಲಿ ರಕ್ತದಾನ ಶ್ರೇಷ್ಠ ದಾನ ಎಂದು ಬಿಎಲ್​ಡಿಇ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್​ ಪ್ರಾಚಾರ್ಯ ಪಿ.ಬಿ. ಕಳಸಗೊಂಡ ಹೇಳಿದರು.

ನಗರದ ಬಿಎಲ್​ಡಿಇ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್​ ವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಬಿಎಲ್​ಡಿಇ ಸಂಸ್ಥೆಯ ಡಾ. ಬಿ.ಎಂ. ಪಾಟೀಲ ವೈದ್ಯಕಿಯ ಮಹಾವಿದ್ಯಾಲಯ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡ ರಕ್ತದಾನ ಶಿಬಿರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅತಿಥಿ ಡಾ. ಪ್ರಕಾಶ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿ, ರಕ್ತದಾನ ಮಾಡುವುದರಿಂದ ಆಗುವ ಉಪಯೋಗದ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು. ಶಿಬಿರದಲ್ಲಿ ಸುಮಾರು 50 ವಿದ್ಯಾರ್ಥಿಗಳು ರಕ್ತದಾನ ಮಾಡಿದರು.

ಎನ್​ಎಸ್​ಎಸ್​ ಯೋಜನಾಧಿಕಾರಿ ಸಂತೋಷ ಸಾಳುಂಕೆ, ಆನಂದ ಚವಾಣ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net