ರಕ್ತದಾನವೇ ಶ್ರೇಷ್ಠದಾನ

MUL RAKTADANA
Published on

ಮುಳಗುಂದ: ದಾನಗಳಲ್ಲಿ ಶ್ರೇಷ್ಠದಾನ ರಕ್ತದಾನವಾಗಿದೆ. ರಕ್ತದಾನ ಮಾಡುವ ಮೂಲಕ ಜೀವ ಉಳಿಸುವ ಕಾರ್ಯದಲ್ಲಿ ಭಾಗವಹಿಸಬೇಕು ಎಂದು ರೆಡ್ ಕ್ರಾಸ್ ವಿಭಾಗದ ಸಂಯೋಜಕ ಬಸವರಾಜ ಹೂಗಾರ ಹೇಳಿದರು.

ಇಲ್ಲಿನ ಆರ್.ಎನ್.ಡಿ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯ ಹಾಗೂ ರೆಡ್ ಕ್ರಾಸ್ ಆಶ್ರಯದಲ್ಲಿ ಆಯೋಜಿಸಿದ್ದ ರಕ್ತದಾನದ ಮಹತ್ವ ಹಾಗೂ ಏಡ್ಸ್ ಜಾಗೃತಿ ಶಿಬಿರದಲ್ಲಿ ಅವರು ಮಾತನಾಡಿದರು.

ಈ ವೇಳೆ ಕಾಲೇಜ್ ವಿದ್ಯಾರ್ಥಿಗಳಿಗೆ ರಕ್ತದಾನದ ಮಹತ್ವ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಅನುಪಮಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net