ರಕ್ತದಾನಕ್ಕೆ ನೀಡಬೇಕು ಮಹತ್ವ

CTD 24 Blood
Published on

ಚಿತ್ರದುರ್ಗ: ದೇಶದಲ್ಲಿನ ಯುವಸಮೂಹ ರಕ್ತದಾನಕ್ಕೆ ಹೆಚ್ಚಿನ ಮಹತ್ವ ನೀಡುವ ಮೂಲಕ ಅಗತ್ಯ ಇರುವವರಿಗೆ ನೆರವಾಗಬೇಕು ಎಂದು ಕೇಂದ್ರದ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಸಲಹೆ ನೀಡಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನಾಚರಣೆ ಅಂಗವಾಗಿ ಅ.2ರವರೆಗೆ ಆಯೋಜಿಸಿರುವ ಸೇವಾ ಪಾಕ್ಷಿಕ ಹಿನ್ನಲೆಯಲ್ಲಿ ಜಿಲ್ಲಾಸ್ಪತ್ರೆ ಆವರಣದಲ್ಲಿನ ರಕ್ತ ನಿಧಿ ಕೇಂದ್ರದಲ್ಲಿ ಬಿಜೆಪಿ ಯುವ ಮೋರ್ಚಾ ಭಾನುವಾರ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

ಪಾಕ್ಷಿಕವನ್ನು ಬಿಜೆಪಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸೇರಿ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಆಚರಿಸಲಾಗುತ್ತಿದೆ. ಹಲವೆಡೆ ಸ್ವಚ್ಛತೆ, ಗಿಡಗಳನ್ನು ನೆಡುವುದು ಸೇರಿ ಅನೇಕ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಹೇಳಿದರು.

ಇದೇ ವೇಳೆ ರಕ್ತದ ಅಗತ್ಯತೆ ಹಾಗೂ ಸಂಗ್ರಹದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ನಂತರ ರಕ್ತದಾನ ಮಾಡಿದವರಿಗೆ ಪ್ರಮಾಣ ಪತ್ರ ವಿತರಿಸಿದರು.

ಕೇಂದ್ರದ ಅಧಿಕಾರಿ ಡಾ.ರೂಪಾ, ಜಿಲ್ಲಾಸ್ಪತ್ರೆಯ ಆರ್‌ಎಂಒ ಡಾ.ಆನಂದ್ ಪ್ರಕಾಶ್, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ನಗರಾಧ್ಯಕ್ಷ ನವೀನ್ ಚಾಲುಕ್ಯ, ಯುವ ಮೋರ್ಚಾ ಅಧ್ಯಕ್ಷ ಶ್ರೀರಾಮು, ಪ್ರಧಾನ ಕಾರ್ಯದರ್ಶಿ ವರುಣ್, ಚಂದ್ರು, ಮಹಿಳಾ ಪದಾಧಿಕಾರಿಗಳಾದ ಕವನಾ, ವೀಣಾ, ಬಸಮ್ಮ, ರಜನಿ ಲೇಪಾಕ್ಷ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net