ಸೇವಾ ಪಾಕ್ಷಿಕ ರಕ್ತದಾನ ಶಿಬಿರ

oplus_2
oplus_2
Published on

ಸೋಮವಾರಪೇಟೆ : ಬಿಜೆಪಿ ಮಂಡಲ ಯುವ ಮೋರ್ಚಾ ವತಿಯಿಂದ ಮಹಾತ್ಮ ಗಾಂಧಿ, ದೀನ ದಯಾಳ್ ಉಪಾಧ್ಯಾಯ ಹಾಗು ನರೇಂದ್ರ ಮೋದಿ ಜನ್ಮ ದಿನದ ಸೇವಾ ಪಾಕ್ಷಿಕದ ಅಂಗವಾಗಿ ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮಕ್ಕೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಚಾಲನೆ ನೀಡಿ ಮಾತನಾಡಿ, ಆರೋಗ್ಯವಂತರು ಪ್ರತಿ 3 ರಿಂದ 4 ತಿಂಗಳಿಗೊಮ್ಮೆ ರಕ್ತದಾನ ಮಾಡಬೇಕು. ರಕ್ತದಾನವು ಜೀವದಾನಕ್ಕೆ ಸಮಾನವಾಗಿದೆ ಎಂದು ತಿಳಿಸಿದರು.
ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹೇಶ್ ತಿಮ್ಮಯ್ಯ ಮಾತನಾಡಿ, ಯುವ ಮೋರ್ಚಾದಿಂದ ಸೇವಾ ಪಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಹಲವಾರು ಸಮಾಜಮುಖಿ ಕೆಲಸಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಶಿಬಿರದಲ್ಲಿ ಒಟ್ಟು 60 ಜನ ರಕ್ತದಾನ ಮಾಡಿದರು. ಜಿಲ್ಲಾ ರಕ್ತನಿಧಿ ಘಟಕದ ಮುಖ್ಯಸ್ಥ ಡಾ. ಕರುಂಬಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಬಿಜೆಪಿ ಯುವ ಮೋರ್ಚಾ ಮಂಡಲ ಅಧ್ಯಕ್ಷ ಮೋಹಿತ್ ತಿಮ್ಮಯ್ಯ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮನುಕುಮಾರ್ ರೈ, ಮಂಡಲ ಪ್ರಧಾನ ಕಾರ್ಯದರ್ಶಿ ದರ್ಶನ್ ಜೋಯಪ್ಪ, ನಗರಾಧ್ಯಕ್ಷ ಎಸ್.ಆರ್. ಸೋಮೇಶ್, ಮಹಿಳಾ ಮೋರ್ಚಾ ಅಧ್ಯಕ್ಷೆ ಕವಿತಾ ವಿರೂಪಾಕ್ಷ, ಎಸ್.ಸಿ. ಮೋರ್ಚಾ ಅಧ್ಯಕ್ಷ ಜಗನ್ನಾಥ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net