

ಯಲಬುರ್ಗಾ: ರಕ್ತದಾನ ಮಾಡುವುದರಿಂದ ಆರೋಗ್ಯ ಸುಧಾರಿಸುತ್ತದೆ ಎಂದು ಆಡಳಿತ ವೈದ್ಯಾಧಿಕಾರಿ ಟಿ.ಜೆ.ರಮೇಶ ಹೇಳಿದರು. ತಾಲೂಕಿನ ಗಾಣಧಾಳ ಗ್ರಾಮದ ಆರೋಗ್ಯ ಕೇಂದ್ರದಲ್ಲಿ ಸಂಜೀವಿನಿ ರಕ್ತನಿಧಿ ಕೇಂದ್ರದಿಂದ ಸೋಮವಾರ ಆಯೋಜಿಸಿದ್ದ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಎಲ್ಲ ದಾನಕ್ಕಿಂತ ರಕ್ತದಾನ ಶ್ರೇಷ್ಟವಾಗಿದೆ. ದೈಹಿಕ ಮತ್ತು ಮಾನಸಿಕ ಆರೋಗ್ಯಕರ ಜೀವನಕ್ಕೆ ರಕ್ತದಾನ ಸಹಕಾರಿಯಾಗಿದೆ. ಸಾವು ಬದುಕಿನ ನಡುವೆ ಹೋರಾಡುವವರ ಜೀವ ಉಳಿಸಲು ರಕ್ತದ ಅವಶ್ಯಕತೆ ಇದೆ. ಆದ್ದರಿಂದ ಯುವ ಜನಾಂಗ ರಕ್ತದಾನ ಮಾಡಲು ಮುಂದಾಗಬೇಕು ಎಂದರು.