

ಬೆಂಗಳೂರು: ನೇರಳೆ ಮಾರ್ಗದ ಕೆಂಗೇರಿ ಮತ್ತು ಚಲ್ಲಘಟ್ಟ ಹಾಗೂ ಬೈಯಪ್ಪನಹಳ್ಳಿ ಮತ್ತು ಕೃಷ್ಣರಾಜಪುರ ಮೆಟ್ರೋ ನಿಲ್ದಾಣಗಳ ನಡುವಿನ ಸಿಗ್ನಲಿಂಗ್ ವ್ಯವಸ್ಥೆಗಳ ಪರೀಕ್ಷೆಯನ್ನು ನಡೆಸುವ ಸಲುವಾಗಿ, ಆಗಸ್ಟ್ ತಿಂಗಳಲ್ಲಿ ಮೆಟ್ರೋ ರೈಲು ಕಾರ್ಯಾಚರಣೆ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.
ಬೆಳಗ್ಗೆ 7.00 ಗಂಟೆಯ ನಂತರ ಕೆಂಗೇರಿಯಿಂದ ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಎಂದಿನಂತೆ ಸೇವೆ ಲಭ್ಯವಿರುತ್ತದೆ.
ಕೆಂಗೇರಿ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಬೆಳಿಗ್ಗೆ 7.00 ಗಂಟೆಯವರೆಗೆ ಯಾವುದೇ ರೈಲು ಸೇವೆ ಲಭ್ಯವಿರುವುದಿಲ್ಲ. ಈ ಮತ್ತು ಅವಧಿಯಲ್ಲಿ ಮೈಸೂರು ರಸ್ತೆ ಮತ್ತು ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ರೈಲು ಸೇವೆ ಲಭ್ಯವಿರುತ್ತದೆ.
ಹಸಿರು ಮಾರ್ಗದ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬಿಎಂಆರ್ಸಿಎಲ್ ಮಾಹಿತಿ ನೀಡಿದೆ.