ಕೆ.ವಿ. ನಾಗರಾಜಮೂರ್ತಿಗೆ ಬಿ.ಎಂ.ಶ್ರೀ. ರಂಗಭೂಮಿ ಪ್ರಶಸ್ತಿ

B M Sri
Published on

ಬೆಂಗಳೂರು: ಬಿ.ಎಂ.ಶ್ರೀ. ಪ್ರತಿಷ್ಠಾನ ನೀಡುವ ಕೆ.ವಿ.ಶಂಕರಗೌಡ ರಂಗಭೂಮಿ ಪ್ರಶಸ್ತಿಗೆ ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷ ಹಾಗೂ ರಂಗಕರ್ಮಿ ಕೆ.ವಿ. ನಾಗರಾಜಮೂರ್ತಿ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು 10 ಸಾವಿರ ನಗದು ಒಳಗೊಂಡಿದೆ. ಸುನೀಲ್ ಕುಮಾರ್ ಸಿಂಗ್ ಮತ್ತು ಕೃಷ್ಣ ಅರುಣಾಚಲಂ ಅವರನ್ನು ಒಳಗೊಂಡ ಸಮಿತಿ ಈ ಆಯ್ಕೆ ಮಾಡಿದೆ.

ಅ. 12ರಂದು ಬೆಳಿಗ್ಗೆ 10.30ಕ್ಕೆ ಬಿ.ಎಂ.ಶ್ರೀ. ಪ್ರತಿಷ್ಠಾನದಲ್ಲಿ ನಡೆಯುವ ಸಮಾರಂಭದಲ್ಲಿ ಸಂಸ್ಕೃತಿ ಪೋಷಕ ಕೆ. ಮೋಹನ್‌ದೇವ್ ಆಳ್ವ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಬೈರಮಂಗಲ ರಾಮೇಗೌಡ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net