ಶ್ರೀ ಸಾಹಿತ್ಯ ಪ್ರಶಸ್ತಿಗೆ ಜಾನಪದ ವಿದ್ವಾಂಸ ಡಾ. ರಾಮೇಗೌಡ ಆಯ್ಕೆ

B M Sri
Published on

ಬೆಂಗಳೂರು: ಬಿ.ಎಂ.ಶ್ರೀ ಪ್ರತಿಷ್ಠಾನದಲ್ಲಿ ಕಮಲಿನಿ ಶಾ. ಬಾಲುರಾವ್ ಅವರು ದತ್ತಿ ಪ್ರಶಸ್ತಿ ಸ್ಥಾಪಿಸಿದ್ದು, 2024ನೇ ಸಾಲಿನ ‘ಶ್ರೀ ಸಾಹಿತ್ಯ ಪ್ರಶಸ್ತಿ’ಗೆ ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಪಕ ಹಾಗೂ ಜಾನಪದ ವಿದ್ವಾಂಸ ಡಾ. ರಾಮೇಗೌಡ (ರಾಗೌ) ಭಾಜನರಾಗಿದ್ದರೆ.

ಪ್ರಶಸ್ತಿಯು ಒಂದು ಲಕ್ಷ ರೂ. ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದ್ದು, 2024ರ ಜನವರಿ 21ರಂದು ಬಿ.ಎಂ.ಶ್ರೀ ಪ್ರತಿಷ್ಠಾನದ ಎಂ.ವಿ.ಸೀ. ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಡಾ. ರಾಮೇಗೌಡ ಅವರು ಕಾವ್ಯ, ನಾಟಕ, ಸಾಹಿತ್ಯ, ವಿಮರ್ಶೆ, ಜಾನಪದ, ಮಕ್ಕಳ ಸಾಹಿತ್ಯ, ಮಹತ್ವದ ಕೃತಿಗಳನ್ನು ಪ್ರಕಟಿಸಿ ಹೊಸ ತಲೆಮಾರಿನ ವಿದ್ವಾಂಸರಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ. ಅವರ ಸಾಹಿತ್ಯ ಕೃಷಿ ಪರಿಗಣಿಸಿ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿದ್ದ ಡಾ. ರಾಜಪ್ಪ ದಳವಾಯಿ, ಪ್ರೊ. ಸಿ. ನಾಗಣ್ಣ, ಬಿ.ಆರ್. ಪೊಲೀಸ ಪಾಟೀಲ ಇತರರು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ ಎಂದು ಬಿ.ಎಂ.ಶ್ರೀ ಪ್ರತಿಷ್ಠಾನದ ಅಧ್ಯಕ್ಷ ಡಾ. ಬೈರಮಂಗಲ ರಾಮೇಗೌಡ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net