ಬಿಎಂಟಿಸಿ ನಿರ್ವಾಹಕ ಹುದ್ದೆ ನೇಮಕಾತಿ ಪರೀಕ್ಷೆ; ಅಕ್ರಮ ನಡೆಸಿ ಸಿಕ್ಕಿಬಿದ್ದ ಅಭ್ಯರ್ಥಿ

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಬಾಸೆಲ್​ ಮಿಷನ್​ ಪಿಯು ಕಾಲೇಜಿನಲ್ಲಿ ಭಾನುವಾರ ಜರುಗಿದ ಬಿಎಂಟಿಸಿ ನಿರ್ವಾಹಕ ಹುದ್ದೆಯ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆಸಿ ಅಭ್ಯರ್ಥಿಯೋರ್ವ ಸಿಕ್ಕಿಬಿದ್ದ ಘಟನೆ ನಡೆದಿದೆ.
ಭಾನುವಾರ ಒಟ್ಟು 2 ಪರೀಕ್ಷೆಗಳು ನಿಗದಿಯಾಗಿದ್ದವು. ಬೆಳಗಿನ ಅವಧಿಯಲ್ಲಿ ನಡೆದ ಸಾಮಾನ್ಯ ಜ್ಞಾನ ಪರೀಕ್ಷೆ ವೇಳೆ ಈ ಘಟನೆ ನಡೆದಿದೆ. ಪರೀಕ್ಷೆಯಲ್ಲಿ ಕಾಪಿ ನಡೆಸಲಾಗಿದೆ ಎಂದು ಕೆಲ ಅಭ್ಯರ್ಥಿಗಳು ಆರೋಪಿಸಿದ್ದರಲ್ಲದೆ, ಕಾಪಿ ಚೀಟಿಯನ್ನು ಸಹ ಕೇಂದ್ರದ ಸಿಬ್ಬಂದಿಗೆ ನೀಡಿದ್ದರು. ಇದರಿಂದ ಕೆಲಕಾಲ ಕೇಂದ್ರದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಪರಿಶೀಲನೆ ನಡೆಸಿದ ಅಧಿಕಾರಿಗಳು, ಶಹರ ಠಾಣೆ ಪೊಲೀಸರು ಒಬ್ಬ ಅಭ್ಯರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ತಹಸೀಲ್ದಾರ ಡಿ.ಎಚ್​. ಹೂಗಾರ, ಬೆಳಗಿನ ಅವಧಿಯಲ್ಲಿ ನಡೆದ ಪರೀಕ್ಷೆಯಲ್ಲಿ ಕಾಪಿ ಮಾಡುತ್ತಿದ್ದ ಓರ್ವ ಅಭ್ಯರ್ಥಿ ಸಿಕ್ಕಿ ಬಿದ್ದಿದ್ದಾನೆ. ಕರ್ನಾಟಕ ಪರೀಕ್ಷೆ ಪ್ರಾಧಿಕಾರ (ಕೆಇಎ) ಅಧಿಕಾರಿ ಹಾಗೂ ಸ್ಥಳಿಯ ನೋಡಲ್​ ಅಧಿಕಾರಿಗಳು ವಿಚಾರಣೆ ನಡೆಸಿ, ಕೆಇಎಗೆ ವರದಿ ಸಲ್ಲಿಸಿದ್ದಾರೆ. ಮುಂದಿನ ಕ್ರಮವನ್ನು ಕೆಇಎ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net