

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು(ಬಿಎಂಟಿಸಿ) ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಶಾಲಾ/ ಕಾಲೇಜಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.
ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪರೀಕ್ಷೆಯು ಬೇರೆ ಬೇರೆ ಕಾಲೇಜುಗಳಲ್ಲಿ ಇರುವುದರಿಂದ ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಮಾ.31 ರಿಂದ ಏ.15 ರವರೆಗೆ ಪರೀಕ್ಷೆಗೆ ಹಾಜರಾಗುವ ಎಲ್ಲ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಪರೀಕ್ಷಾ ದಿನಾಂಕಗಳಂದು ಪರೀಕ್ಷಾ ಕೇಂದ್ರಗಳ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲ ಮಾರ್ಗಗಳಲ್ಲಿ ಬಸ್‌ಗಳ ಕಾರ್ಯಾಚರಣೆ ಗೊಳಿಸಲಾಗುವುದು. ಹೆಚ್ಚುವರಿ ಬಸ್‌ಗಳ ಅಗತ್ಯತೆ ಕಂಡುಬಂದಲ್ಲಿ ಕಾರ್ಯಾಚರಣೆ ಮಾಡಲಾಗುವುದು ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.