ವೇತನ ಹೆಚ್ಚಳಕ್ಕೆ ಬಿಎಂಟಿಸಿ ಬಸ್​ ಚಾಲಕರ ಆಗ್ರಹ

25 05 2025_BNG_RURAL_PAGE_5
ಸೂರ್ಯಸಿಟಿ 32ನೇ ಟಕ ಬಸ್​ ಡಿಪೋ ಮುಂದೆ ಬಿಎಂಟಿಸಿ ಎಲೆಕ್ಟ್ರಿಕ್​ ಬಸ್​ ಗುತ್ತಿಗೆ ಚಾಲಕರು ಪ್ರತಿಭಟನೆ ನಡೆಸಿದರು.
Published on

ಆನೇಕಲ್​ : ವೇತನ ಹೆಚ್ಚಳಕ್ಕೆ ಒತ್ತಾಯಿಸಿ ತಾಲೂಕಿನ ಸೂರ್ಯಸಿಟಿ 32ನೇ ಟಕ ಬಸ್​ ಡಿಪೋ ಮುಂದೆ ಬಿಎಂಟಿಸಿ ಎಲೆಕ್ಟ್ರಿಕ್​ ಬಸ್​ ಗುತ್ತಿಗೆ ಚಾಲಕರು ಪ್ರತಿಭಟನೆ ನಡೆಸಿದರು.

‘ಕೆಲಸ ಸ್ಥಗಿತಗೊಳಿಸಿದ 200ಕ್ಕೂ ಹೆಚ್ಚು ಗುತ್ತಿಗೆ ಚಾಲಕರು ಪ್ರತಿಭಟನೆ ನಡೆಸಿದ್ದು, ಏಜೆನ್ಸಿ ಮೂಲಕ ಚಾಲಕರನ್ನು ನೇಮಕ ಮಾಡಿಕೊಂಡಿದೆ. ಎರಡು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರೂ, 22 ಸಾವಿರ ರೂಪಾಯಿ ನೀಡಲಾಗುತ್ತಿದೆ. ಹೀಗಾಗಿ ಕನಿಷ್ಠ 28 ಸಾವಿರ ರೂಪಾಯಿ ನೀಡುವಂತೆ ಒತ್ತಾಯಿಸಿದರು.

ಚಾಲಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ, ಬಿಡುವಿನ ವೇಳೆ ವಿಶ್ರಾಂತಿ ಪಡೆಯಲು ಜಾಗದ ಕೊರತೆ ಇದೆ. ಸಮಸ್ಯೆಗಳ ಬಗ್ಗೆ ಹಲವು ಬಾರಿ ಹೇಳಿದರೂ ಅಧಿಕಾರಿಗಳು ರ್ನಿಲಕ್ಷ$್ಯ ತೋರಿದ್ದಾರೆ ಎಂದು ಪ್ರತಿಭಟನಾನಿರತ ಚಾಲಕರು ಆರೋಪಿಸಿದರು.

ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು, ಚಾಲಕರಿಗೆ ಎಲ್ಲ ವ್ಯವಸ್ಥೆ ಕಲ್ಪಿಸಿದ್ದೇವೆ. ಸಣ್ಣಪುಟ್ಟ ಸಮಸ್ಯೆ ಇದ್ದರೆ ಬಗೆಹರಿಸುವುದಾಗಿ ಹೇಳಿದ ನಂತರ ಪ್ರತಿಭಟನೆ ವಾಪಸ್​ ಪಡೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net