ಎಲೆಕ್ಟ್ರಿಕ್ ಬಸ್ ನಲ್ಲಿ ಕಾಣಿಸಿಕೊಂಡ ಬೆಂಕಿ

img_0403-1.jpg
Published on

ಬಿಡದಿ: ನಿಲ್ಲಿಸಿದ್ದ ಎಲೆಕ್ಟ್ರಿಕಲ್ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಅಲ್ಲೇ ಇದ್ದ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿರುವ ಘಟನೆ ಬಿಡದಿಯ ಬಿಎಂಟಿಸಿ ವಿದ್ಯುತ್ ಚಾಲಿತ ಬಸ್ ಡಿಪೋದಲ್ಲಿ ಶುಕ್ರವಾರ ನಡೆದಿದೆ.

ಬಸ್ ಡಿಪೋದಲ್ಲಿ ಚಾರ್ಜ್ ಮಾಡಿ ಬಸ್ ನಿಲ್ಲಿಸಲಾಗಿತ್ತು. ಈ ವೇಳೆ ಏಕಾಏಕಿ ಸಣ್ಣದಾಗಿ ಬೆಂಕಿ ಕಾಣಿಸಿಕೊಂಡು ದಟ್ಟ ಹೊಗೆ ಆವರಿಸಿತ್ತು. ತಕ್ಷಣ ಡಿಪೋ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯಚರಣೆ ನಡೆಸಿ ದೊಡ್ಡ ಅನಾಹುತವನ್ನ ತಪ್ಪಿಸಿದ್ದಾರೆ.

ಬ್ಯಾಟರಿ ವೈರ್ ಲೂಸ್ ಆಗಿದ್ದ ಕಾರಣದಿಂದಾಗಿ ಬ್ಯಾಟರಿ ಬಳಿ ಬೆಂಕಿ ಕಾಣಿಸಿಕೊಂಡು ದಟ್ಟ ಹೊಗೆ ಕಾಣಿಸಿತ್ತು. ಸ್ಥಳದಲ್ಲೆ ಇದ್ದ ಬೆಂಕಿ ನಂದಿಸುವ ಸಾಧನದಿಂದ ಬೆಂಕಿ ನಂದಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net