ವಾಲ್ಮೀಕಿ ಮಹರ್ಷಿ ಜಯಂತಿಗೆ ಭಹಿಷ್ಕಾರ: ಸ್ವಾಮೀಜಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ ಶಾಸಕ ಶ್ರೀನಿವಾಸಮೂರ್ತಿ

2
ನೆಲಮಂಗಲದ ತಾಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಶಾಸಕ ಡಾ. ಕೆ.ಶ್ರೀನಿವಾಸಮೂರ್ತಿ ಮಾತನಾಡಿದರು. ತಹಸೀಲ್ದಾರ್ ಕೆ.ಮಂಜುನಾಥ್, ತಾಪಂ ಇಒ ಮೋಹನ್‌ಕುಮಾರ್, ಕ್ಷೇತ್ರಶಿಕ್ಷಣಾಧಿಕಾರಿ ಎಂ.ಎಚ್.ತಿಮ್ಮಯ್ಯ, ಸಮಾಜಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಎಂ.ವಾಣಿ,ಮತ್ತಿತರರು ಇದ್ದರು.
Published on

ನೆಲಮಂಗಲ: ಜನಸಂಖ್ಯೆಯ ಅನುಗುಣವಾಗಿ ಎಸ್‌ಸಿ ಹಾಗೂ ಎಸ್‌ಟಿ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಈ ಬಾರಿಯ ವಾಲ್ಮೀಕಿ ಜಯಂತಿಯನ್ನು ಭಹಿಷ್ಕರಿಸುವುದಾಗಿ ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ತಿಳಿಸಿದರು.


ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ನಿಮಿತ್ತ ಶುಕ್ರವಾರ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಅ.9ರಂದು ವಾಲ್ಮೀಕಿ ಜಯಂತಿಯನ್ನು ತಾಲೂಕು ಆಡಳಿತದಿಂದ ಸರಳವಾಗಿ ಆಚರಣೆ ಮಾಡಿಕೊಳ್ಳಬೇಕು. ಯಾವುದೇ ಸಮುದಾಯ ಮುಖಂಡರು ಹಾಗೂ ಜನ ಪ್ರತಿನಿಧಿಗಳು ಭಾಗವಹಿಸುವುದಿಲ್ಲ ಎಂದರು.


ವಾಲ್ಮೀಕಿ ಸಂಘದ ಅಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ, ರಾಜ್ಯದ 152 ಜನಾಂಗದ ಅನುಕೂಲಕ್ಕಾಗಿ ಮೀಸಲಾತಿ ಹೆಚ್ಚಿಸುವಂತೆ ಆಗ್ರಹಿಸಿ ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಶ್ರೀ ಪ್ರಸನ್ನಾನಂದ ಸ್ವಾಮೀಜಿ 232 ದಿನಗಳಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಧರಣಿ ನಡೆಸುದ್ದಾರೆ. ಆದರೂ ಸರ್ಕಾರ ಸ್ಪಂದಿಸುತ್ತಿಲ್ಲ. ಹೀಗಾಗಿ ಸರ್ಕಾರದಿಂದ ಆಚರಣೆ ಮಾಡಲಿರುವ ವಾಲ್ಮೀಕಿ ಜಯಂತಿಯನ್ನು ಭಹಿಷ್ಕರಿಸಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಆಚರಣೆ ಮಾಡಲಾಗುವುದು ಎಂದರು.


ತಾಲೂಕು ಆರೋಗ್ಯಾಧಿಕಾರಿ ಹೇಮವತಿ, ನಗರಸಭೆ ಅಧ್ಯಕ್ಷೆ ಲತಾ ಹೇಮಂತ್‌ಕುಮಾರ್, ಉಪಾಧ್ಯಕ್ಷೆ ಸುಜಾತಾಮುನಿಯಪ್ಪ, ಸದಸ್ಯ ಆನಂದ್, ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಬಿ.ಆರ್.ಭಾಸ್ಕರ್‌ಪ್ರಸಾದ್, ಪ್ರಧಾನ ಕಾರ್ಯದರ್ಶಿ ನಿಡವಂದ ರಾಜು, ನೆ.ಯೋ.ಪ್ರಾಧಿಕಾರ ಮಾಜಿ ಅಧ್ಯಕ್ಷ ಎನ್.ಪಿ.ಹೇಮಂತ್‌ಕುಮಾರ್, ಕನ್ನಡ ಸಾಂಸ್ಕೃತಿಕ ರಂಗದ ಅಧ್ಯಕ್ಷ ಡಿ.ಸಿದ್ದರಾಜು, ದಲಿತ ಕೂಲಿ ಕಾರ್ಮಿಕ ಸಂಘಟನೆ ಅಧ್ಯಕ್ಷ ಗಂಗಬೈಲ್ಲಪ್ಪ, ಜನಸೈನ್ಯ ಸಂಘಟನೆ ಸಂಸ್ಥಾಪಕ ಅಧ್ಯಕ್ಷ ನರಸಿಂಹಯ್ಯ, ಅಧ್ಯಕ್ಷ ನವೀನ್, ಶಿರಸ್ತೇದಾರ್ ರವೀಂದ್ರ, ರಾಜ್ವನಿರೀಕ್ಷಕ ಸುದೀಪ್, ಅಶ್ವತ್ಥ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net