ಬೆಳಗಾವಿ ಕ್ಯಾಂಪ್ ಪ್ರದೇಶದಲ್ಲಿ ಸಿಇಒ ಆತ್ಮಹತ್ಯೆ!

IMG-20231125-WA0005.jpg
Published on

-ಈಚೆಗಷ್ಟೇ ಸಿಬಿಐ ದಾಳಿ ನಡೆದಿತ್ತು.


ಬೆಳಗಾವಿ: ಬೆಳಗಾವಿ ದಂಡು ಮಂಡಳಿ ಕಾರ್ಯನಿರ್ವಾಹಕ ಅಧಿಕಾರಿ(ಸಿಇಒ) ಕೆ.ಆನಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ ಎರಡು ವರ್ಷಗಳಿಂದ ಬೆಳಗಾವಿಯಲ್ಲಿ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಈಚೆಗೆಷ್ಟೇ ಅಕ್ರಮ ವ್ಯವಹಾರ ದೂರಿನ ಹಿನ್ನೆಲೆ ಸಿಬಿಐ ಅಧಿಕಾರಿಗಳು ದಂಡು ಮಂಡಳಿಯ ಮೇಲೆ ದಾಳಿ ನಡೆಸಿದ್ದರು. ಇದೀಗ ಏಕಾಏಕಿ ಸಿಇಒ ಆತ್ಮಹತ್ಯೆ ಮಾಡಿಕೊಂಡಿರುವುದು ನಾನಾ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net