

ಮಂಡ್ಯ: ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮುರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್.ಅಂಬೇಡ್ಕರ್, ಇಂದಿರಾಗಾಂಧಿ ವಸತಿ ಶಾಲೆಯ 2025-26 ನೇ ಸಾಲಿಗೆ 6ನೇ ತರಗತಿಯ ಆಂಗ್ಲ ಮಾಧ್ಯಮ ಪ್ರವೇಶಾತಿಗೆ ಅರ್ಜಿ ಅಹ್ವಾನಿಸಲಾಗಿದೆ.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಸತಿ ಸಹಿತ ಉಚಿತ ವ್ಯಾಸಂಗ, ಊಟ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರ ಶೈಕ್ಷಣಿಕ ಸಾಮಗ್ರಿ ನೀಡಲಾಗುವುದು. ಪ್ರಸ್ತುತ 2024-25ನೇ ಸಾಲಿನಲ್ಲಿ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹತ್ತಿರದ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಿ ಅರ್ಜಿ ಪಡೆದು ಎಸ್‌ಎಟಿಎಸ್ ಸಂಖ್ಯೆ, ಎರಡು ಭಾವಚಿತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಹಾಗೂ ಸಂಬಂಧಿತ ಇತರೆ ದಾಖಲಾತಿಗಳೊಂದಿಗೆ ಜ.25ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.