ದೋಣಿ ಮಗುಚಿ ಓರ್ವ ಸಾವು, ಇಬ್ಬರು ಪಾರು

Sumanth
Published on

ದೋಣಿ ಮಗುಚಿ ಓರ್ವ ಸಾವು, ಇಬ್ಬರು ಪಾರು

ಕೋಟ: ಇಲ್ಲಿನ ಪಾರಂಪಳ್ಳಿ ಪಡುಕರೆ ಕಡಲ ಕಿನಾರೆಯಲ್ಲಿ ಶುಕ್ರವಾರ ಮೀನುಗಾರಿಕೆ ತೆರಳಿದ ಸಂದರ್ಭ ದೋಣಿ ಮಗುಚಿ ಪಾರಂಪಳ್ಳಿ ನಿವಾಸಿ ಸುಮಂತ್ ಮೊಗವೀರ(23) ಎಂಬುವರು ಮೃತಪಟ್ಟಿದ್ದು, ಇನ್ನಿಬ್ಬರು ಪಾರಾಗಿದ್ದಾರೆ.
ಶುಕ್ರವಾರ ಬೆಳಗ್ಗೆ ಸ್ಥಳೀಯರಾದ ಸಂದೀಪ್, ಪ್ರಜ್ವಲ್ ಹಾಗೂ ಸುಮಂತ್ ನಾಡದೋಣಿ ಮೂಲಕ ಮೀನುಗಾರಿಕೆಗೆ ಸಮುದ್ರಕ್ಕೆ ತೆರಳಿದ್ದರು. ಸಮುದ್ರದಲ್ಲಿ ಭಾರಿ ಗಾತ್ರದ ಅಲೆಗೆ ಸಿಲುಕಿ ದೋಣಿ ಮಗುಚಿ ಬಿದ್ದಿದೆ. ಅದರಲ್ಲಿದ್ದ ಮೂವರೂ ನೀರಿಗೆ ಬಿದ್ದಿದ್ದು, ಸಂದೀಪ್ ಮತ್ತು ಪ್ರಜ್ವಲ್ ಈಜಿ ದಡ ಸೇರಿದ್ದಾರೆ. ಸುಮಂತ್‌ಗೆ ಈಜು ಗೊತ್ತಿದ್ದರೂ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ. ಸಮೀಪದಲ್ಲೇ ಮೀನುಗಾರಿಕೆ ನಡೆಸುತ್ತಿದ್ದ ಸ್ಥಳೀಯರು ಬಲೆ ಬಿಸಿ ಸುಮಂತ್‌ನನ್ನು ಮೇಲೆ ಎಳೆದು, ಆಸ್ಪತ್ರೆಗೆ ಸಾಗಿಸಿದರು. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದರು. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net