ನವಜಾತ ಗಂಡು ಶಿಶುವಿನ ಶವ ಪತ್ತೆ

navjatha shishu
Published on

ಮೈಸೂರು: ನಾಯ್ಡು ನಗರದ ಚಾಮುಂಡೇಶ್ವರಿ ದೇವಸ್ಥಾನದ ರಸ್ತೆಯ ಮೋರಿಯಲ್ಲಿ ಮಂಗಳವಾರ ನವಜಾತ ಗಂಡು ಶಿಶುವಿನ ಶವ ಪತ್ತೆಯಾಗಿದೆ.

ದುಷ್ಕರ್ಮಿಗಳು ಸೋಮವಾರ ರಾತ್ರಿಯೇ ಶಿಶುವಿನ ಶವವನ್ನು ಸುತ್ತಿ ಎಸೆದು ಹೋಗಿರುವ ಬಗ್ಗೆ ಶಂಕಿಸಲಾಗಿದೆ. ಆ ರಸ್ತೆಯಲ್ಲಿ ಓಡಾಡುತ್ತಿದ್ದ ಸಾರ್ವಜನಿಕರು ಶಿಶುವಿನ ಮೃತದೇಹವನ್ನು ನೋಡಿದ್ದಾರೆ. ಬಳಿಕ ಈ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಶಿಶುವಿನ ಶವವನ್ನು ಸದ್ಯ ಕೆ.ಆರ್.ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ಈ ಕುರಿತು ಎನ್.ಆರ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net