ಅಪರಿಚಿತ ಪುರುಷನ ಶವ ಪತ್ತೆ

cyber crime
Published on

ಮಳವಳ್ಳಿ: ಪಟ್ಟಣದ ಹೊರವಲಯದ ಕನಕಪುರ ರಸ್ತೆಯ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಚರಂಡಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಶನಿವಾರ ಬೆಳಗಿನ ಜಾವ ಪತ್ತೆಯಾಗಿದೆ.

35 ರಿಂದ 40 ವರ್ಷ ವಯೋಮಾನದ ಪುರುಷನ ಶವವಾಗಿದ್ದು, ಟೋಲ್‌ಗೇಟ್ ಬಳಿಯ ಚರಂಡಿ ನೀರಿನಲ್ಲಿ ತೇಲುತ್ತಿರುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ತೆರಳಿದ ಗ್ರಾಮಾಂತರ ಠಾಣೆ ಪೊಲೀಸರು, ಮೃತದೇಹವನ್ನು ಹೊರ ತೆಗೆಸಿದರು. ಯಾವುದೋ ಕಾಯಿಲೆಯಿಂದ ಬಳಲುತ್ತಿದ್ದ ಈತ ಹಲವು ದಿನಗಳಿಂದ ಸುತ್ತಮುತ್ತ ತೆವಳುತ್ತ ಭಿಕ್ಷೆ ಬೇಡುತ್ತಿದ್ದ ಎನ್ನಲಾಗಿದೆ. ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net