

ಉಳ್ಳಾಲ: ಬಾಳೆಪುಣಿ ಗ್ರಾಮದ ಮುಂದುಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಪಾತೂರಿನ ಮುಹಮ್ಮದ್ ನಿಯಾಫ್(28) ಎಂಬಾತನ ಮೃತದೇಹ ಮಂಗಳವಾರ ಮಧ್ಯಾಹ್ನ ಪತ್ತೆಯಾಗಿದೆ.
ಸ್ಥಳೀಯ ನಿವಾಸಿಯೊಬ್ಬರು ಬಸ್ ನಿಲ್ದಾಣದ ಬಳಿ ದ್ವಿಚಕ್ರ ವಾಹನ ಇಡಲು ಹೋಗಿದ್ದ ಸಂದರ್ಭ ಮೃತದೇಹ ನೋಡಿ ಸ್ಥಳೀಯರಿಗೆ ಮಾಹಿತಿ ನೀಡಿದರು. ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತನ ಗುರುತು ಪತ್ತೆಹಚ್ಚಿ ಮರಣೋತ್ತರ ಪರೀಕ್ಷೆಗೆ ರವಾನಿಸಿದರು. ಮುಹಮ್ಮದ್ ನಿಯಾಫ್ ಬಾವಿಯ ರಿಂಗ್ ತಯಾರಿಕೆ ಹಾಗೂ ಇತರ ಕೂಲಿ ಕೆಲಸ ಮಾಡಿಕೊಂಡಿದ್ದನು. ಭಾನುವಾರ ಸಂಜೆ ಮನೆಯಿಂದ ತೆರಳಿದ್ದನು. ಮಾದಕ ಪದಾರ್ಥ ವ್ಯಸನಿಯಾಗಿದ್ದು ಅದರಿಂದಲೇ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಕಳೆದ ವರ್ಷ ಮುದುಂಗಾರುಕಟ್ಟೆ ಬಳಿ ಮಹಿಳೆಯ ಸರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಮುಹಮ್ಮದ್ ನಿಯಾಫ್ ವಿರುದ್ಧ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.