‘ಬೊಗಸೆ ನೀರು‘ ಕೃತಿ ಬಿಡುಗಡೆ 29ಕ್ಕೆ

New Habbu New
Published on

ಹುಬ್ಬಳ್ಳಿ : ಹಿರಿಯ ಪತ್ರಕರ್ತ ಅರುಣಕುಮಾರ ಹಬ್ಬು ಅವರ ಬದುಕಿನ ಅಂತರಂಗದ ಅನಾವರಣ ’ಬೊಗಸೆ ನೀರು’ ಕೃತಿ ಬಿಡುಗಡೆ ಸಮಾರಂಭವನ್ನು ಜೂ. 29ರಂದು ಬೆಳಗ್ಗೆ 11ಗಂಟೆಗೆ ನಗರದ ಗೋಕುಲ ರಸ್ತೆಯ ಹವ್ಯಕ ಭವನದಲ್ಲಿ ಆಯೋಜಿಸಲಾಗಿದೆ.

ಡಾ. ಸಂಗಮೇಶ ಹಂಡಗಿ ಸಾಹಿತ್ಯ ಪ್ರತಿಷ್ಠಾನ, ಸಂಯುತಾ ಪ್ರತಿಷ್ಠಾನ, ಕನ್ನಡ ಧ್ವನಿ ಟ್ರಸ್ಟ್, ಹá--ಧಾ ಹವ್ಯಕ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉದ್ಘಾಟಿಸುವರು.ದಾವಣಗೆರೆ ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕ ಡಾ. ಬಿ.ಆರ್. ರವಿಕಾಂತೇಗೌಡ ಅವರು ಕೃತಿ ಲೋಕಾರ್ಪಣೆಗೊಳಿಸುವರು.

ಹು-ಧಾ ಹವ್ಯಕ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷ ವಿ.ಎಂ. ಭಟ್ ಅಧ್ಯಕ್ಷತೆ ವಹಿಸುವರು. ಬೆಂಗಳೂರಿನ ಹಿರಿಯ ಪತ್ರಕರ್ತೆ ಆರ್. ಪೂರ್ಣಿಮಾ, ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಅತಿಥಿಗಳಾಗಿ ಪಾಲ್ಗೊಳ್ಳುವರು.

ಕೃತಿಕಾರ ಅರುಣಕುಮಾರ ಹಬ್ಬು ಉಪಸ್ಥಿತರಿರಲಿದ್ದು, ಪತ್ರಕರ್ತ ಗಣಪತಿ ಗಂಗೊಳ್ಳಿ ಕೃತಿ ಪರಿಚಯ ಮಾಡುವರು ಎಂದು ಹಂಡಿಗಿ ಸಾಹಿತ್ಯ ಪ್ರತಿಷ್ಠಾನದ ಅಧ್ಯಕ್ಷ ಜಿ.ಬಿ. ಗೌಡಪ್ಪಗೋಳ, ಸಂಯುತಾ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಜನಮೇಜಯ ಉಮರ್ಜಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net