ನಿಡುವಂದ ಕೈಗಾರಿಕಾ ಪ್ರದೇಶದ ಕಬ್ಬಿಣದ ಕಾರ್ಖಾನೆಯಲ್ಲಿ ಬಾಯ್ಲರ್ ಸಿಡಿದು ಕಾರ್ಮಿಕ ಸಾವು

6 dpt 3 ramahai tek _paolisra beti
???????????????????????????????????????????????????????????????????????????????????????????????????????????????????????????????????????????????????????????????????????????????????????????????????????
Published on

ದಾಬಸ್‌ಪೇಟೆ: ಸೋಂಪುರ ಹೋಬಳಿಯ ನಿಡುವಂದ ಕೈಗಾರಿಕಾ ಪ್ರದೇಶದ ಕಬ್ಬಿಣದ ಕಾರ್ಖಾನೆಯಲ್ಲಿ ಬಾಯ್ಲರ್ ಸಿಡಿದು ಕಾರ್ಮಿಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಉತ್ತರ ಪ್ರದೇಶ ಮೂಲದ ಓಂಕಾರ್ ಯಾದವ್ (40) ಮೃತ. ನಾಲ್ಕೈದು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಯಾದವ್ ಗುರುವಾರ ಬೆಳಗ್ಗೆ ಕೆಲಸ ಮಾಡುತ್ತಿದ್ದಾಗ ಬಾಯ್ಲರ್ ಸಿಡಿದಿದೆ. ಮೃತದೇಹವನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ನೆಲಮಂಗಲ ಡಿವೈಎಸ್ಪಿ ಮೋಹನ್‌ಕುಮಾರ್, ವೃತ್ತ ನಿರೀಕ್ಷಕ ಶಿವಣ್ಣ, ದಾಬಸ್‌ಪೇಟೆ ಪೊಲೀಸ್ ಠಾಣಾ ಪಿಎಸ್‌ಐ ವಸಂತ್ ಘಟನಾ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು. ದಾಬಸ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net