

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಲ್ಲಡ್ಕ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕಲ್ಲಡ್ಕ ವಲಯ ಹಾಗೂ ಸರ್ಕಾರಿ ಪ್ರೌಢ ಶಾಲೆ ಗೋಳ್ತಮಜಲು ಆಶ್ರಯದಲ್ಲಿ ಬೊಳಂತಿಮೊಗರು ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಬುಧವಾರ ನಡೆಯಿತು. ಜನಜಾಗೃತಿ ವೇದಿಕೆ ಕಲ್ಲಡ್ಕ ವಲಯ ಅಧ್ಯಕ್ಷ ಭಟ್ಯಪ್ಪ ಶೆಟ್ಟಿ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿ ಜೆಸಿಐ ವಲಯ ತರಬೇತುದಾರ ಸಂದೀಪ್ ಸಾಲ್ಯಾನ್ ಮಾಹಿತಿ ನೀಡಿದರು. ಮುಖ್ಯಶಿಕ್ಷಕಿ ಸಂಧ್ಯಾ ರಾಣಿ ಅಧ್ಯಕ್ಷತೆ ವಹಿಸಿದ್ದರು. ಜನಜಾಗೃತಿ ವೇದಿಕೆ ಸದಸ್ಯ ಚಿನ್ನಾ ಕಲ್ಲಡ್ಕ, ಶಿಕ್ಷಕರಾದ ರಾಮಣ್ಣ, ಪ್ರವೀಣ್, ಪ್ರಭಾಕರ, ಯೋಜನೆಯ ಗದಗ ಜಿಲ್ಲಾ ತರಬೇತಿ ಮೇಲ್ವಿಚಾರಕಿ ಹೇಮಲತಾ ಉಪಸ್ಥಿತರಿದ್ದರು. ಶಿಕ್ಷಕಿ ಭಾಗಿರಥಿ ಸ್ವಾಗತಿಸಿ, ಸೇವಾ ಪ್ರತಿನಿಧಿ ಯಶೋದಾ ವಂದಿಸಿದರು. ವಲಯ ಮೇಲ್ವಿಚಾರಕಿ ಸುಗುಣ ಶೆಟ್ಟಿ ನಿರೂಪಿಸಿದರು.