

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ದೊಡ್ಡನಲ್ಲಾಳ ಗ್ರಾಮದಲ್ಲಿ ನಾಡಬಾಂಬ್ ಸ್ಫೋಟವಾಗಿದೆ. ಸ್ಫೋಟಕ್ಕೆ ಮಗ ಸಾವನ್ನಪ್ಪಿದ್ದು, ತಂದೆ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ.
ಗ್ರಾಮದ ಪವನ್ (20) ಮೃತ ಯುವಕ. ಪವನ್ ತಂದೆ ನಾಗೇಶ(45) ಕಾಲಿಗೆ ತೀವ್ರ ಪೆಟ್ಟಾಗಿದ್ದು, ಹೊಸಕೋಟೆಯ ಎಂವಿಜೆ ಅಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.
ಸ್ಫೋಟದ ತೀವ್ರತೆಗೆ ಮನೆಯ ಚಾವಣಿ ಛಿದ್ರ ಛಿದ್ರಗೊಂಡಿದೆ. ಕಾಡು ಪ್ರಾಣಿಗಳ ಬೇಟೆಗಾಗಿ ನಾಡಬಾಂಬ್ ತಯಾರಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಹೊಸಕೋಟೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.