

ಕಲಬುರಗಿ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿ ಸ್ಪೋಟ ಮಾಡಲಾಗುವುದು ಎಂದು ಬೆದರಿಕೆ ಹಾಕಿದ ಘಟನೆ ನಡೆದಿದೆ.
ದುಷ್ಕರ್ಮಿಗಳು ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಮೇಲ್ ರವಾಸಿ ಬಾಂಬ್ ಇರಿಸಲಾಗಿದೆ ಎಂದು ಬೆದರಿಕೆ ಹಾಕಲಾಗಿದೆ. ಈ ಮಾಹಿತಿ ಅರಿಯುತ್ತಲೇ ನಗರ ಪೊಲೀಸ್ ಆಯುಕ್ತ ಚೇತನ ಆರ್., ಡಿಸಿಪಿ ಕನ್ನಿಕಾ ಸಿಕ್ರಿವಾಲ್ , ಎಸಿಪಿ ರಾಜಣ್ಣ ಇತರರು ದೌಡಾಯಿಸಿದರು.
ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ, ಬೆರಳಚ್ಚು ಸಿಬ್ಬಂದಿ ಭೇಟಿ ನೀಡಿ ಶೋಧ ನಡೆಸಿದರು. ಕೊನೆಗೆ ಹುಸಿ ಬಾಂಬ್ ಬೆದರಿಕೆ ಇರಬಹುದು ಎಂದು ವಿಮಾನ ನಿಲ್ದಾಣದ ಹಾಗೂ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.