ಬೆಂಗಳೂರಿನ ಐಬಿಡಿಒ ಕಂಪನಿಗೆ ಬಾಂಬ್ ಬೆದರಿಕೆ ಕರೆ

ibdo (1)
Published on

ಬೆಂಗಳೂರು: ನಗರದ ಬೆಳ್ಳಂದೂರಿನಲ್ಲಿರುವ ಇಕೋ ಸ್ಪೇಸ್​ನ ಐಬಿಡಿಒ ಕಂಪನಿಗೆ ಇಂದು ಮಧ್ಯಾಹ್ನ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ.

ಇಂದು 2 ಗಂಟೆ ಸುಮಾರಿಗೆ ಅನಾಮಧೇಯ ವ್ಯಕ್ತಿಯಿಂದ ಫೋನ್ ಕರೆ ಬಂದಿದೆ. ಬಾಂಬ್ ಇಟ್ಟಿದ್ದೀವಿ ಸ್ವಲ್ಪ ಸಮಯದಲ್ಲಿ ಬ್ಲಾಸ್ಟ್ ಆಗುತ್ತದೆ ಎಂದು ಕರೆ ಬಂದಿದೆ. ಸ್ಥಳೀಯ ಪೊಲೀಸರಿಗೆ ಕಂಪನಿಯಿಂದ ಮಾಹಿತಿ ಬರುತ್ತಿದ್ದಂತೆ ಸ್ಥಳಕ್ಕೆ ಬೆಳ್ಳಂದೂರು ಪೊಲೀಸರು ದೌಡಾಯಿಸಿದ್ದಾರೆ.

ಮುಂಜಾಗ್ರತೆ ಹಿನ್ನಲೆ ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯದಳ, ಐಎಸ್ ಡಿ ಅಧಿಕಾರಿಗಳು ಸಹ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

ಈ‌ ಹಿಂದೆ ಇದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿ ಮೇಲೆ ಅನುಮಾನ ವ್ಯಕ್ತವಾಗಿದೆ. ಇತ್ತೀಚೆಗಷ್ಟೇ ಕೆಲಸದಿಂದ ತೆಗೆದುಹಾಕಲಾಗಿತ್ತು, ಆತನೇ ಬಾಂಬ್ ಬೆದರಿಕೆ ಕರೆ ಮಾಡಿರೋ ಶಂಕೆ ವ್ಯಕ್ತವಾಗಿದೆ. ಫೋನ್ ಕರೆ ಸ್ವೀಕರಿಸಿದ ಉದ್ಯೋಗಿಯಿಂದಲೂ ಹಳೇ ಉದ್ಯೋಗಿಯ ಹೆಸರು ಹೇಳಿಕೆ ಬಂದಿದೆ. ಹೀಗಾಗಿ ಪೊಲೀಸರು ಹಳೇ ಉದ್ಯೋಗಿಯ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net