ಬೆಂಗಳೂರಿನ ವಿದ್ಯಾ ಸಂಸ್ಥೆಗೆ ಬಾಂಬ್ ಬೆದರಿಕೆ; ಸ್ಥಳಕ್ಕೆ ದೌಡಾಯಿಸಿದ ಪೊಲೀಸರು

Bomb Threat Email To Bengaluru Vidya Institute
Published on

ಬೆಂಗಳೂರು: ಬೆಂಗಳೂರಿನ ಕೇಂದ್ರಿಯವಿದ್ಯಾಲಯ ಭಾರತೀಯ ವಿದ್ಯಾಸಂಸ್ಥೆಗೆ ಬಾಂಬ್ ಬೆದರಿಕೆ ಬಂದಿದೆ. ಈ ಮೇಲ್ ಮಾಡಿರುವ ದುಷ್ಕರ್ಮಿಗಳು ಸ್ಫೋಟ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

Sahukarisrinuvasarao65@gmail.com ಎಂಬ ಇ-ಮೇಲ್ ಮೂಲಕ ಕೇಂದ್ರೀಯ ವಿದ್ಯಾಲಯ ಭಾರತೀಯ ವಿದ್ಯಾಸಂಸ್ಥೆಗೆ ಬಾಂಬ್ ಬೆದರಿಕೆ ಬಂದಿದೆ. ಸದ್ಯ ಪೊಲೀಸ್ ಹಾಗು ಬಾಂಬ್ ಸ್ಕ್ವಾಡ್ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸ್ಕೂಲ್ ಒಳಗೆ ಬಾಂಬ್ ಇಟ್ಟಿದ್ದೀವಿ. ಬೆಳಗ್ಗೆ 10:20ಕ್ಕೆ ಬ್ಲಾಸ್ಟ್ ಆಗುತ್ತೆ ಎಂದು ಆಗಂತಕರು ಮೇಲ್ ಮಾಡಿ ಬೆದರಿಸಿದ್ದಾರೆ. ಮೇಲ್ ಬಂದ ತಕ್ಷಣ ಶಾಲಾ ಆಡಳಿತ ಮಂಡಳಿ ಅಲರ್ಟ್ ಆಗಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆ ಶಾಲೆಗೆ ಬಂದ ಪೊಲೀಸ್ ಹಾಗು ಬಾಂಬ್ ಸ್ಕ್ವಾಡ್ ಪರಿಶೀಲನೆ ನಡೆಸಿದ್ದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದು ಬಂದಿದೆ. ಸದ್ಯ ಕೇಂದ್ರೀಯ ವಿದ್ಯಾಲಯ ಪ್ರಿನ್ಸಿಪಾಲ್ ಅಮೃತಬಾಲ ಅವರು ಘಟನೆ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

2023ರ ಡಿಸೆಂಬರ್​ ತಿಂಗಳಲ್ಲೂ ಇದೇ ರೀತಿ ಕೆಲ ಕಿಡಿಗೇಡಿಗಳು ಬೆಂಗಳೂರಿನ 60 ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಕಳಿಸಿ ಭಯದ ವಾತಾವರಣ ಸೃಷ್ಟಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net