ಬಳ್ಳಾರಿ : ಯುವಕನೊಬ್ಬ ಕುಡಿದ ಮತ್ತಿನಲ್ಲಿ ಕಚೇರಿಯಲ್ಲಿ ಬಾಂಬ್‌ಯಿದೆ ಎಂಬುದಾಗಿ ನಗರ ಶಾಸಕ ನಾರಾಭರತರೆಡ್ಡಿ ಅವರ ಮೊಬೈಲ್‌ಗೆ ಸಂದೇಶ ಕಳುಹಿಸಿದ ಘಟನೆ ಸೋಮವಾರ ತಡರಾತ್ರಿ ನಡೆದಿದೆ.
ಇಲ್ಲಿನ ರೂಪನಗುಡಿ ರಸ್ತೆಯ ಸಂತೋಷ ಎಂಬ ಯುವಕ ಗೆಳೆಯರೊಂದಿಗೆ ಮದ್ಯ ಸೇವಿಸಿ ಕಚೇರಿಯಲ್ಲಿ ಬಾಂಬ್ ಇರುವುದಾಗಿ ಶಾಸಕರಿಗೆ ವಾಟ್ಸ್‌ಪ್ ಮೂಲಕ ಸಂದೇಶ ಕಳುಹಿಸಿದ್ದಾನೆ. ಬೆಂಗಳೂರಿನಲ್ಲಿರುವ ಶಾಸಕ ನಾರಾ ಭರತರೆಡ್ಡಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಯುವಕನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ ವೇಳೆ ಮೇಲ್ನೋಟಕ್ಕೆ ಮದ್ಯ ಸೇವನೆ ಮಾಡಿರುವುದು ಸಾಬೀತಾಗಿದೆ. ಶಾಸಕರಿಗೆ ಏಕೆ ಈ ರೀತಿ ಸಂದೇಶ ಕಳುಹಿಸಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ಗಾಂಧಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.