

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೆಲ್ಗೆ ಹುಸಿ ಬಾಂಬ್ ಬೆದರಿಕೆ ( Bomb Threat ) ಇ-ಮೇಲ್ ಬಂದಿದೆ. ಪೊಲೀಸರು ಮತ್ತು ಬಾಂಬ್ ಸ್ಕ್ವಾಡ್ ಪರಿಶೀಲನೆ ನಡೆಸಿದರು.
ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಇ-ಮೇಲ್ ಮಾಡಿದ್ದಾರೆ. ಕೂಡಲೆ ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು, ಬಾಂಬ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹುಸಿ ಬಾಂಬ್ ಬೆದರಿಕೆ ಎಂದು ದೃಢವಾಗಿದೆ.
ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತಾಜ್ ವೆಸ್ಟ್ ಎಂಡ್ ಹೊಟೇಲನಲ್ಲಿ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೇಲ್ನಲ್ಲಿ ರಾಜಕಾರಣಿಗಳು, ಕ್ರಿಕೆಟರ್ಗಳು ಆಗಾಗ ವಾಸ್ತವ್ಯ ಹೂಡುತ್ತಾರೆ.
ಕೆಲವು ಬಾರಿ ಶಾಲೆಗಳು, ಹೋಟೆಲ್ಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆಗಳು ಬರುತ್ತಿದ್ದು, ಪೊಲೀಸರು ಹೆಚ್ಚು ಅಲರ್ಟ್ ಆಗಿದ್ದಾರೆ. ಶಾಲೆಗಳಿಗೆ ಬಾಂಬ್ ಇಟ್ಟಿರುವ ಬೆದರಿಕೆ ಇಮೇಲ್ಗಳು ಬಂದಿರುವ ಪ್ರಕರಣ ಇವೆ.