

ಕುಶಾಲನಗರ:
ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ವತಿಯಿಂದ ನಿವೃತ್ತ ಶಿಕ್ಷಕರು ಹಾಗೂ ಸಂಘದ ಮಾಜಿ ಅಧ್ಯಕ್ಷ ಡಿ. ಕೆ. ಬೊಮ್ಮಯ್ಯ ಅವರಿಗೆ ಶನಿವಾರ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಕುಶಾಲನಗರದ ಸಂಘದ ಕಚೇರಿಯಲ್ಲಿ ಅಧ್ಯಕ್ಷ ಎಂ. ಬಿ. ಮೊಣ್ಣಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬೊಮ್ಮಯ್ಯ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಡಿ.ಕೆ. ಬೊಮ್ಮಯ್ಯ ಎರಡು ಬಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಸಂಘದ ಸ್ಥಾಪಕ ಅಧ್ಯಕ್ಷ ಎಂ. ಎಚ್. ನಜೀರ್ ಅಹಮದ್, ಮಾಜಿ ಅಧ್ಯಕ್ಷ ಬಾಚರಣಿಯಂಡ ಪಿ .ಅಪ್ಪಣ್ಣ, ಸಿ. ಸಿ. ರಾಘವಯ್ಯ, ಮಂಡೆಪAಡ ಬೋಸ್ ಮೊಣ್ಣಪ್ಪ, ಕಾರ್ಯದರ್ಶಿ ಜಿ. ಕೆಂಚಪ್ಪ, ಖಜಾಂಚಿ ವಿ. ಆರ್. ಹೆಗಡೆ, ಮಾಜಿ ಕಾರ್ಯದರ್ಶಿ ಅಬ್ರಹಾಂ ದಿವಾಕರ್ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರು ಇದ್ದರು.