ಶಂಬೂರಿನಲ್ಲಿ ಬೊಂಡಾಲ ಪ್ರಶಸ್ತಿ ಪ್ರದಾನ : ಶ್ರೀ ಅನಂತ ಪದ್ಮನಾಭ ಆಸ್ರಣ್ಣ ಆಶೀರ್ವಚನ

New Project (2)
Published on

ಬಂಟ್ವಾಳ: ಕಟೀಲು ಮೇಳದ ತೆಂಕುತಿಟ್ಟಿನ ಹಿರಿಯ ಕಲಾವಿದ ಹಾಸ್ಯಗಾರ ರವಿಶಂಕರ ವಳಕುಂಜ ಅವರಿಗೆ ಬೊಂಡಾಲ ಜನಾರ್ದನ ಶೆಟ್ಟಿ ಮತ್ತು ರಾಮಣ್ಣ ಶೆಟ್ಟಿ ಸಂಸ್ಮರಣೆ ಸಮಿತಿಯಿಂದ ಶನಿವಾರ ಶಂಬೂರು ಗ್ರಾಮದ ಬೊಂಡಾಲದಲ್ಲಿ ಕಟೀಲು ಮೇಳದ ಯಕ್ಷಗಾನ ಸೇವೆ ಸಂದರ್ಭ ಬೊಂಡಾಲ ಪ್ರಶಸ್ತಿ ಪ್ರದಾನಿಸಿ ಸನ್ಮಾನಿಸಲಾಯಿತು.

ಮಾಜಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಅನಂತ ಪದ್ಮನಾಭ ಆಸ್ರಣ್ಣ ಕಟೀಲು ಶುಭಹಾರೈಸಿ, ಆಶೀರ್ವಚನ ನೀಡಿದರು. ರಾಜ್ಯ ಧಾರ್ಮಿಕ ಪರಿಷತ್ತು ಸದಸ್ಯ ಎ.ರವಿಶಂಕರ ಶೆಟ್ಟಿ ಬಡಾಜೆ ಗುತ್ತು, ಕೆ.ಕೆ.ಶೆಟ್ಟಿ ಕುಂಬ್ಳೆ ರಾಜರಾಜೇಶ್ವರಿ ದೇವಸ್ಥಾನ ಅವರು ಅಭಿನಂದನೆ ಸಲ್ಲಿಸಿದರು. ರವಿಶಂಕರ ವಳಕ್ಕುಂಜ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ, ಬೊಂಡಾಲ ಮನೆತನದವರು ಯಕ್ಷಗಾನ ಹಾಗೂ ಕಲಾವಿದರಿಗೆ ನೀಡುತ್ತಿರುವ ಪ್ರೋತ್ಸಾಹಕ್ಕೆ ಕೃತಜ್ಞತೆ ಸಲ್ಲಿಸಿದರು.

ನರಿಕೊಂಬು ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂತೋಷ್ ಉಪಸ್ಥಿತರಿದ್ದರು. ಬೊಂಡಾಲ ಸಂಸ್ಮರಣೆ ಮತ್ತು ಬಯಲಾಟ ಸಮಿತಿ ಅಧ್ಯಕ್ಷ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಸ್ವಾಗತಿಸಿ ಪರಿಚಯಿಸಿದರು. ಭಾಸ್ಕರ ರೈ ಕುಕ್ಕುವಳ್ಳಿ ನಿರೂಪಿಸಿದರು. ಸೀತಾರಾಮ ಶೆಟ್ಟಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net