ಬೂದಿಹಾಳ-ಪೀರಾಪುರ ಏತ ನೀರಾವರಿ ಕಾಮಗಾರಿ ಪೂರ್ಣಗೊಳಿಸಿ

Boodihal-Pirapur lift irrigation work completed
ವಿಜಯಪುರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿದರು. ಗುರುರಾಜ ಪಡಶೆಟ್ಟಿ, ಎಚ್.ಎನ್. ಬಿರಾದಾರ ಇತರರಿದ್ದರು.
Published on

ವಿಜಯಪುರ: ಬೂದಿಹಾಳ-ಪೀರಾಪುರ ಏತ ನೀರಾವರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ ತಾಳಿಕೋಟೆ ತಾಲೂಕಿನ 38 ಹಳ್ಳಿಗಳಿಗೆ ಸಮಗ್ರ ನೀರಾವರಿ ಕಲ್ಪಿಸಿಕೊಡಬೇಕು ಎಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಆಗ್ರಹಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದಾಗ ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆ ಜಾರಿಗೆ ತರಲು ಪ್ರಯತ್ನಿಸಿದ್ದರು. ಆದರೆ ಆ ಯೋಜನೆ ಅನುಷ್ಠಾನಕ್ಕೆ ಬರಲಿಲ್ಲ. ನಂತರದಲ್ಲಿ ಚಿಮ್ಮಲಗಿ ಏತ ನೀರಾವರಿ ಯೋಜನೆ ರೂಪಿಸಲಾಗಿತ್ತು. ಅದನ್ನೂ ಸರ್ಕಾರ ಕೈಬಿಟ್ಟಿತು.

ತದನಂತರ 2017ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಬೂದಿಹಾಳ- ಪೀರಾಪುರ ಏತ ನೀರಾವರಿ ಹೊಸ ಯೋಜನೆ ಅನುಷ್ಠಾನಕ್ಕೆ ತಂದರು. ನಂತರದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಮೊದಲ ಹಂತದ ಕಾಮಗಾರಿ ಉದ್ಘಾಟಿಸಿ, 2ನೇ ಹಂತದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. ಅದರಲ್ಲಿ ಶೇ. 90ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಉಳಿದ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಅವರು ಒತ್ತಾಯಿಸಿದರು.

ಗುರುರಾಜ ಪಡಶೆಟ್ಟಿ, ಎಚ್.ಎನ್. ಬಿರಾದಾರ, ರುದ್ರಗೌಡ ಬಿರಾದಾರ, ಎಸ್.ಸಿ. ನಾಗರೆಡ್ಡಿ, ಮಲ್ಲಣ್ಣ ಹಿರೇಕುರಬರ, ಕಾಶಿನಾಥ ತಳವಾರ, ಶಿವಪ್ಪ ಇಂಗಳೇಶ್ವರ, ಸುಭಾಷಗೌಡ ಬಿಸಿರೊಟ್ಟಿ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net