ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

book
Published on

ಮಡಿಕೇರಿ:

ಮಡಿಕೇರಿ ತಾಲೂಕು ಕತ್ತಲೆಕಾಡುವಿನ ಕ್ಲೋಸ್‌ಬರ್ನ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸ್ಥಳೀಯ ಬೆಳೆಗಾರರಾದ ಜೆ. ಶರತ್ ಬಾಬುರವರು ಪ್ರಸಕ್ತ ಶೈಕ್ಷಣಿಕ ಸಾಲಿಗೆ ಅಗತ್ಯವಿರುವ ನೋಟ್ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು.

ಶಾಲೆಯಲ್ಲಿ 1ರಿಂದ 7ನೇ ತರಗತಿವರೆಗೆ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೆ ಅಗತ್ಯವಿರುವ ನೋಟ್ ಪುಸ್ತಕಗಳನ್ನು ಖರೀದಿಸಿ ಶಿಕ್ಷಕರಿಗೆ ತಲುಪಿಸಿದ್ದರು.

ಶಿಕ್ಷಕರು ಅದನ್ನು ಇತ್ತೀಚೆಗೆ ವಿದ್ಯಾರ್ಥಿಗಳಿಗೆ ವಿತರಿಸಿದರು. ಸರ್ಕಾರಿ ಶಾಲೆ ಹಾಗೂ ವಿದ್ಯಾರ್ಥಿಗಳ ಮೇಲಿನ ಕಾಳಜಿಯಿಂದ ನೆರವಾದ ಶರತ್ ಬಾಬು ಅವರ ಕಾರ್ಯಕ್ಕೆ ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿಯವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪುಸ್ತಕ ವಿತರಣೆ ಸಂದರ್ಭ ಮುಖ್ಯ ಶಿಕ್ಷಕಿ ಸುಜಾತ, ಶಿಕ್ಷಕರಾದ ಉಷಾ, ಪ್ರಜ್ಞಾ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net