

ಕಡಬ: ಪುಣ್ಚಪ್ಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆರಂಭೋತ್ಸವ ಪ್ರಯುಕ್ತ ವಿದ್ಯಾರ್ಥಿಗಳನ್ನು ಸಿಂಹಾಸನದಲ್ಲಿ ಕುಳ್ಳಿರಿಸಿ ಆರತಿ ಬೆಳಗಿ ಪಠ್ಯಪುಸ್ತಕ ನೀಡುವ ಮೂಲಕ ಇತ್ತೀಚೆಗೆ ವಿಶೇಷವಾಗಿ ಸ್ವಾಗತಿಸಲಾಯಿತು.
ಹಳೇ ವಿದ್ಯಾರ್ಥಿ ಸಂಘದ ಪಿ.ಡಿ.ಕೃಷ್ಣಕುಮಾರ್ ರೈ ಕಾರ್ಯಕ್ರಮ ಉದ್ಘಾಟಿಸಿದರು. ಗ್ರಾಪಂ ಅಧ್ಯಕ್ಷೆ ಸುಂದರಿ ಬಿ.ಎಸ್ ಅವರು ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ಉಚಿತವಾಗಿ ವಿತರಿಸಿದರು. ಸವಣೂರು ಗ್ರಾಪಂ ಸದಸ್ಯ ಗಿರಿಶಂಕರ ಸುಲಾಯ, ಎಸ್‌ಡಿಎಂಸಿ ಅಧ್ಯಕ್ಷ ವಿಜಯ ಶುಭಹಾರೈಸಿದರು. ದಾನಿಗಳಾದ ಕೃಷ್ಣಕುಮಾರ್ ರೈ ಪಿ.ಡಿ, ಸುಹಾಸ್ ಕಾರಂತ್, ಹರೀಶ್ ಪಿ.ತೋಟತ್ತಡ್ಕ, ಗಿರಿಶಂಕರ ಸುಲಾಯ, ವಿಜಯ ಕುಚ್ಚೆಜಾಲು ವತಿಯಿಂದ ನೀಡಲಾದ ಲೇಖನ ಸಾಮಗ್ರಿಗಳನ್ನು ಮಕ್ಕಳಿಗೆ ವಿತರಿಸಲಾಯಿತು.
ಅಂಗನವಾಡಿ ಕಾರ್ಯಕರ್ತೆ ಸೇಸಮ್ಮಾ, ಎಸ್‌ಡಿಎಂಸಿ ಸದಸ್ಯರು, ಪಾಲಕರು, ಅಕ್ಷರ ದಾಸೋಹ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಪದವೀಧರ ಶಿಕ್ಷಕಿ ಶೋಭಾ ಕೆ ವಂದಿಸಿದರು. ಮುಖ್ಯಗುರು ರಶ್ಮಿತಾ ನರಿಮೊಗರು ಕಾರ್ಯಕ್ರಮ ನಿರೂಪಿಸಿದರು.
ಮಾಹಿತಿ ಕೈಪಿಡಿ ಬಿಡುಗಡೆ
ಪ್ರಸಕ್ತ ವರ್ಷದ ಶಾಲಾ ಆರಂಭೋತ್ಸವವನ್ನು 2025-26ರ ಕಲಿಕಾ ಸಿಂಹಾಸನ ಎಂಬ ವಿಶಿಷ್ಟ ರೀತಿಯಲ್ಲಿ ಆಯೋಜಿಸಲಾಗಿದೆ. ಪುತ್ತೂರು ತಾಲೂಕಿನ ಶೈಕ್ಷಣಿಕ ಮಾಹಿತಿ ಒಳಗೊಂಡ 24 ಪುಟಗಳ ‘ಸೇರೋಣ ಸರ್ಕಾರಿ ಶಾಲೆಗೆ’ ಎಂಬ ಮಾಹಿತಿ ಕೈಪಿಡಿ ಬಿಡುಗಡೆಗೊಳಿಸಲಾಯಿತು.