ಕದಿಯಲಾಗದ ಸಂಪತ್ತು ವಿದ್ಯೆ : ಸಂತೋಷ್ ಪಿ.ಹೇಳಿಕೆ

book 1
ಉಚಿತ ಪುಸ್ತಕ ವಿತರಣೆ, ಶೈಕ್ಷಣಿಕ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವನ್ನು ನಿವೃತ್ತ ಮುಖ್ಯಶಿಕ್ಷಕಿಧರ್ಣಮ್ಮ ಟೀಚರ್ ಉದ್ಘಾಟಿಸಿದರು.
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ- ನಾಲ್ಕೂರು-ತೆಂಕಕಾರಂದೂರು ಆಶ್ರಯದಲ್ಲಿ ದತ್ತಿನಿಧಿ ವತಿಯಿಂದ ಉಚಿತ ಪುಸ್ತಕ ವಿತರಣೆ, ಶೈಕ್ಷಣಿಕ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಬಳಂಜದಲ್ಲಿ ನಡೆಯಿತು.

ಬಳಂಜ ಶಾಲಾ ನಿವೃತ್ತ ಮುಖ್ಯಶಿಕ್ಷಕಿ, ಹಿರಿಯರಾದ ಧರ್ಣಮ್ಮ ಟೀಚರ್ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ.ಕೋಟ್ಯಾನ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಯಾರು ಕದಿಯಲಾಗದ ದೊಡ್ಡ ಸಂಪತ್ತು ವಿದ್ಯೆ ಮಾತ್ರ. ಈ ನಿಟ್ಟಿನಲ್ಲಿ 21 ವರ್ಷಗಳಿಂದ ವಿದ್ಯೆಗೆ ವಿಶೇಷವಾದ ಮಹತ್ವ, ಪ್ರೋತ್ಸಾಹವನ್ನು ನೀಡುವ ನಿಟ್ಟಿನಲ್ಲಿ ದತ್ತಿನಿಧಿಯಿಂದ ಪುಸ್ತಕ ವಿತರಣೆಯನ್ನು ಮಾಡುತ್ತ ಬರುತ್ತಿದ್ದೇವೆ ಎಂದರು.

ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮನೋಹರ್ ಬಳಂಜ ಮಾತನಾಡಿ, ಮನೆ ಬೆಳಗಬೇಕಾದರೆ ಶಿಕ್ಷಣ ಮುಖ್ಯ. ಇಲ್ಲಿ ಪುಸ್ತಕ ಪಡೆದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಮಾಜದ ಆಸ್ತಿಯಾಗಬೇಕು ಎಂದರು.

ಸಂಘದ ಗೌರವಾಧ್ಯಕ್ಷ ಎಚ್.ಧರ್ಣಪ್ಪ ಪೂಜಾರಿ, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಭಾರತಿ ಸಂತೋಷ್, ಸಂಘದ ಕಾರ್ಯದರ್ಶಿ ಜಗದೀಶ್ ಬಳ್ಳಿದಡ್ಡ ಉಪಸ್ಥಿತರಿದ್ದರು.

ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್ ಸ್ವಾಗತಿಸಿ, ಸಂಘದ ಸದಸ್ಯರಾದ ಚಂದ್ರಹಾಸ್ ಬಳಂಜ, ವಿಶಾಲ ಜಗದೀಶ್ ನಿರೂಪಿಸಿದರು. ಸಂಘದ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರು, ಸದಸ್ಯರು ಸಹಕರಿಸಿದರು.

ಸಾಧಕರಿಗೆ ವಿದ್ಯಾರ್ಥಿ ವೇತನ

ಶೈಕ್ಷಣಿಕ ಸಾಧಕರಾದ ಅನುಪ್ರಿಯಾ ಬಳಂಜ, ಶರಣ್ಯ ಬರಮೇಲು, ಶಿವಧ್ಯಾನ್ ಕಾಪಿನಡ್ಕ, ಮನ್ವಿತಾ ಬಳಂಜ, ಧೃತಿ ಕಾಪಿನಡ್ಕ, ಸಮೀಕ್ಷಾ ಹೇವ, ಸಮೀಕ್ಷಾ ತೆಂಕಕಾರಂದೂರು ಅವರನ್ನು ಸನ್ಮಾನಿಸಲಾಯಿತು. ಶೇ.80ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು. 8, 9, 10 ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net