

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಬರವಣಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.
ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್.ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿರುವ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಬೇಕು ಎನ್ನುವ ನಿಟ್ಟಿನಲ್ಲಿ ವೀರೇಂದ್ರ ಹೆಗ್ಗಡೆ ಅವರು ಗ್ರಾಮೀಣ ಶಾಲೆಗಳಿಗೆ ಅನೇಕ ಸವಲತ್ತುಗಳನ್ನು ನೀಡುತ್ತಾ ಬಂದಿದ್ದಾರೆ. ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಿಗೆ ಜೀವನ ಶಿಕ್ಷಣ ನೀಡುವುದೇ ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಮೂಲ ಉದ್ದೇಶ ಎಂದರು.
ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಧನ್ಯಕುಮಾರ್ ಮಾತನಾಡಿ, ಪ್ರಾಥಮಿಕ ಶಾಲೆಯ ಮಕ್ಕಳಿಗೆ ಆರಂಭದಿಂದಲೇ ಉತ್ತಮ ಶಿಕ್ಷಣ ದೊರೆತಾಗ ಮುಂದೊಂದು ದಿನ ಸಮಾಜದಲ್ಲಿ ಉತ್ತಮ ಪ್ರಜೆಯಾಗುತ್ತಾರೆ ಎಂದರು.
ಮುಖ್ಯಶಿಕ್ಷಕ ಶೀನಪ್ಪಗೌಡ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಟಿಕ್ಕಾ ಸಾಹೇಬ್ ಉಪಸ್ಥಿತರಿದ್ದರು.
ಶೀನಪ್ಪಗೌಡ ಸ್ವಾಗತಿಸಿ,ಶಿಕ್ಷಕ ನಿಶಾಂತ್ ಕುಮಾರ್ ವಂದಿಸಿದರು. ಪುಷ್ಪಲತಾ ಕಾರ್ಯಕ್ರಮ ನಿರೂಪಿಸಿದರು.