ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

pusthaka vitharane
Published on

ಮಡಿಕೇರಿ: ಕೊಂಡಂಗೇರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಬಡ ವಿದ್ಯಾರ್ಥಿಗಳಿಗೆ ಜಿಲ್ಲಾ ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಕೆ.ಜಿ.ಜಾಶಿರ್ ಮೂರ್ನಾಡು ಹಾಗೂ ಕೊಂಡಂಗೇರಿ ಜೆಡಿಎಸ್ ಮುಖಂಡ ನಜೀರ್ ಆಲಿ ಅವರು ಪುಸ್ತಕಗಳನ್ನು ವಿತರಿಸಿದರು.


ಸುಮಾರು ೨೫ ಸಾವಿರ ರೂ. ವೆಚ್ಚದಲ್ಲಿ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಪುಸ್ತಕಗಳನ್ನು ನೀಡಲಾಗಿದೆ ಎಂದು ಜಾಶಿರ್ ತಿಳಿಸಿದರು.


ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಾದ ರವಿಕುಮಾರ್, ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಜಯಂತಿ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net